First Maharathotsava of the magnificent Kuntoji Basaveshwara temple

ವೈಭವದ ಕುಂಟೋಜಿ ಬಸವೇಶ್ವರರ ದೇವಸ್ಥಾನದ ಪ್ರಥಮ ಮಹಾರಥೋತ್ಸವ

ವೈಭವದ ಕುಂಟೋಜಿ ಬಸವೇಶ್ವರರ ದೇವಸ್ಥಾನದ ಪ್ರಥಮ ಮಹಾರಥೋತ್ಸವ

ಮುದ್ದೇಬಿಹಾಳ : ಕೊಪ್ಪಳದ ಗವಿಸಿದ್ಧೇಶ್ವರ ಸ್ವಾಮೀಜಿ ಲೋಕಾರ್ಪಣೆಗೊಳಿಸಿದ ತಾಲ್ಲೂಕಿನ ಕುಂಟೋಜಿ ಶ್ರೀ ಬಸವೇಶ್ವರ ಹಾಗೂ ಶ್ರೀ ಸಂಗಮೇಶ್ವರ ದೇವಸ್ಥಾನದ ರಥೋತ್ಸವ ಸಾವಿರಾರು ಭಕ್ತಾದಿಗಳ ಜಯಘೋಷಗಳ ಮಧ್ಯೆ ಮಂಗಳವಾರ ಸಂಜೆ 6.35ಕ್ಕೆ ಜರುಗಿತು.

ತಾಲ್ಲೂಕಿನ ಆಲೂರು ಗ್ರಾಮದ ಭಕ್ತರಿಂದ ತೇರಿನ ಕಳಸ, ಗರಸಂಗಿಯಿಂದ ತೇರಿನ ಹಗ್ಗ, ಮುದ್ದೇಬಿಹಾಳ ಹಾಗೂ ಅಬ್ಬಿಹಾಳ ಭಕ್ತರಿಂದ ರುದ್ರಾಕ್ಷಿ ಹಾರಗಳು ಆಗಮಿಸಿದ ನಂತರ ಪಲ್ಲಕ್ಕಿಯೊಂದಿಗೆ ರಥದ ಸುತ್ತ ಪ್ರದಕ್ಷಿಣೆ ಹಾಕಲಾಯಿತು. ನಿಡಸೋಸಿ ಶಿವಲಿಂಗೇಶ್ವರ ಸಿದ್ಧಸಂಸ್ಥಾನಮಠದ ಪ್ರಭು ಸ್ವಾಮೀಜಿ, ಕುಂಟೋಜಿ ಚೆನ್ನವೀರ ಶಿವಾಚಾರ್ಯರು, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಜಾತ್ರಾ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹಾಗೂ ಇತರರು ನೂತನ ಪ್ರಥಮ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಪ್ರಥಮ ಬಾರಿಗೆ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ತರುಣರು ತಮ್ಮೂರಿನ ತೇರು ಪಾದಗಟ್ಟಿ ಮುಟ್ಟುತ್ತಲೇ ಜಯಘೋಷಗಳೊಂದಿಗೆ ಕುಣಿದು ಸಂಭ್ರಮಿಸಿದರು.‌ ಭಕ್ತರು ರಥಕ್ಕೆ ಉತ್ತತ್ತಿ, ಬಾಳೆ ಹಣ್ಣು ಮತ್ತಿತರ ಮಂಗಲಕಾರಿ ವಸ್ತುಗಳು ಅರ್ಪಿಸಿ ನಮಿಸಿದರು. ಸಿಪಿಐ ಮೊಹ್ಮದ ಫಸಿವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡರು.
ವಿಶೇಷವೆಂದರೆ ಎರಡು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿದ್ದ ಮಳೆರಾಯ ರಥೋತ್ಸವದ ಸಮಯದಲ್ಲಿ ಎರಡ್ಮೂರು ತಾಸು ಬಿಡುವು ಕೊಟ್ಟಿದ್ದು ವಿಶೇಷವಾಗಿತ್ತು. ರಥೋತ್ಸವದ ಸಂದರ್ಭದಲ್ಲಿ ಪ್ರಮುಖರಾದ ಸಂಗನಬಸಯ್ಯ ಹಿರೇಮಠ, ಸಿದ್ದಲಿಂಗಯ್ಯ ಕಲ್ಯಾಣಮಠ, ಶಿವಣ್ಣ ಚಿನಿವಾರ,ಅಮರೇಶ ಗೂಳಿ, ಶರಣು ಹಿರೇಮಠ, ಎಂ.ಎಸ್.ಕನ್ನೂರ, ಸಂಗಮ್ಮ ಉಣ್ಣಿಬಾವಿ, ಸುರೇಶ ಅಳಗುಂಡಗಿ, ಮಲ್ಲಪ್ಪ ಬಡಿಗೇರ, ಹಣಮಪ್ಪ ಕಾರಕೂರ, ರಾಘವೇಂದ್ರ ಬಡಿಗೇರ, ಮಹೇಶ ಅಂಬಿಗೇರ ಭಾಗವಹಿಸಿದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ