1.9 crore profit for Nalatwada Veereshwar Cooperative Bank

ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ವೀರೇಶ್ವರ ಬ್ಯಾಂಕಿನಿಂದ ಶೀಘ್ರ ಎಟಿಎಂ ಸೇವೆ- ಎಂ.ಎಸ್.ಪಾಟೀಲ್

ನಾಲತವಾಡ : ಆರಂಭದಲ್ಲಿ 1167 ಶೇರು ಸದಸ್ಯರೊಂದಿಗೆ ಕೇವಲ 8.67 ಲಕ್ಷ ಬಂಡವಾಳದೊದಿಗೆ ಆರಂಭಗೊಡ ಇಲ್ಲಿನ ಶ್ರೀ ಶರಣ ವೀರೇಶ್ವರ ಸಹಕಾರಿ ಬ್ಯಾಂಕು ಸದ್ಯಕ್ಕೆ 5608 ಶೇರು ಸದಸ್ಯರನ್ನು ಹೊಂದಿದ್ದು ಆರ್ಥಿಕ ವರ್ಷಾಂತ್ಯಕ್ಕೆ 1.09 ಕೋಟಿ ರೂ. ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಎಸ್.ಪಾಟೀಲ ಹೇಳಿದರು.

ಪಟ್ಟಣದ ರತ್ನಸಂಗಮ ಕಲ್ಯಾಣ ಮಂಟಪದಲ್ಲಿ 29ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಬ್ಯಾಂಕಿನಿಂದ ಐದು ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು ಕೋರ್ ಬ್ಯಾಂಕಿಂಗ್ ವ್ಯವಸ್ಥೆ, ಆರ್.ಟಿ.ಜಿ.ಎಸ್, ನೆಫ್ಟ್, ಎಸ್.ಎಂ.ಎಸ್.ಸೇವೆ, ಇ ಸ್ಟಾಂಪಿಂಗ್, ಸೇಫ್ ಲಾಕರ್ ವ್ಯವಸ್ಥೆ ಹೊಂದಿ ಉತ್ತಮ ಸೇವೆ ನೀಡುತ್ತಿದ್ದು ಮುಂಬರುವ ದಿನಗಳಲ್ಲಿ ಬ್ಯಾಂಕಿನಿಂದ ಎಟಿಎಂ ಸೇವೆ ಆರಂಭಿಸಲಾಗುವುದು ಎಂದರು.

ನಿವೃತ್ತ ಉಪನ್ಯಾಸಕ ಸಿ.ಎಸ್.ರೇವಡಿ, ವೀರೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚರ‍್ಯ ಡಿ. ಆರ್. ಮಳಖೇಡ ಮಾತನಾಡಿ, ಬ್ಯಾಂಕಿನ ಆರ್ಥಿಕ ಸ್ಥಿತಿಗತಿ ಉತ್ತಮವಾಗಿರಬೇಕಾದರೆ ಸಿಬ್ಬಂದಿಯ ಕಾರ್ಯಕ್ಷಮತೆ, ಸಾಲ ವಸೂಲಾತಿಯಲ್ಲಿ ತೋರುವ ನಿರ್ಧಾರಗಳು ಮಹತ್ವದ ಪಾತ್ರ ವಹಿಸುತ್ತವೆ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದಿಯಾಗಿ ಪ್ರತಿಯೊಬ್ಬರೂ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಬ್ಯಾಂಕ್‌ನ ಸದಸ್ಯ ಬಸವರಾಜ ತಿರುಮುಖೆ ಮಾತನಾಡಿ, ಮುಂಬರುವ ದಿನಗಳಲ್ಲಿ ಬ್ಯಾಂಕಿನಿಂದ ಹೊಸ ಶಾಖೆಗಳನ್ನು ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡ್ರ ವರದಿ ವಾಚಿಸಿ, ಬ್ಯಾಂಕಿನ ಪ್ರಗತಿಗೆ ಸಿಬ್ಬಂದಿ ಹೊಂದಾಣಿಕೆ, ಆಡಳಿತ ಮಂಡಳಿ ಸಹಕಾರ, ಪ್ರೋತ್ಸಾಹದಿಂದ ಬ್ಯಾಂಕು ಪ್ರಗತಿಯತ್ತ ಸಾಗಿದೆ. ಲಿಂಗಸೂರು ಶಾಖೆಗೆ ಹೊಸ ಕಟ್ಟಡ ನಿರ್ಮಿಸಲು ಜಾಗೆ ಖರೀದಿಸಲಾಗಿದೆ ಎಂದು ತಿಳಿಸಿದರು.

ಸನ್ಮಾನ: ಪಟ್ಟಣದ ಸೇರಿ ಲಿಂಗಸ್ಗೂರ, ಮುದ್ದೇಬಿಹಾಳ, ಹುಣಸಗಿ, ಮುದ್ದೇಬಿಹಾಳ ಶಾಖೆಯಲ್ಲಿ ಉತ್ತಮ ಗ್ರಾಹಕರನ್ನು ಮತ್ತು ಸ್ಥಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ಸೇವೆ ಸಲ್ಲಿಸುತ್ತೀರುವ ತಜ್ಞ ವೈದ್ಯರಾದ ಡಾ.ರಂಗನಾಥ್ ವೈದ್ಯ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕಲಬುರ್ಗಿಯ ಶರಣಬಸಪ್ಪ ಅಪ್ಪಾ ಮತ್ತು ಅಹ್ಮದಬಾದ್ ವಿಮಾನ ದುರಂತ, ಬ್ಯಾಂಕಿನ ಸದಸ್ಯ ದಿ.ಸಂಗಪ್ಪ ಚಿನಿವಾಲರ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನ ಆಚರಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅಂಗಡಿ, ಸದಸ್ಯರಾದ ಬಸವರಾಜ ತಾಳಿಕೋಟಿ, ಬಸವಂತಪ್ಪ ಗಂಗನಗೌಡ್ರ, ಸಂಗಣ್ಣ ಹಡಲಗೇರಿ, ಎಸ್. ಎಸ್. ಸ್ಥಾವರಮಠ, ಕೆ. ಆರ್. ಎತ್ತಿನಮನಿ, ಗುರುಸಂಗಪ್ಪ ಗಡೇದ, ಬಾಲಪ್ಪ ಹಟ್ಟಿ, ಸುಮಿತ್ರಾ ದೇಶಮುಖ, ಭಾರತಿ ಮೇಟಿ(ಪಾಟೀಲ), ಎಸ್.ಎಸ್.ಮಣ್ಣೂರ, ಈಶ್ವರಪ್ಪ ಚಿನಿವಾಲರ, ಅಶೋಕ ಹಡಲಗೇರಿ, ಶರಣಪ್ಪ ಕರಡಿ ಇದ್ದರು. ನಂದಿತಾ ಶೀಲವಂತರ ಹಾಗೂ ಯಮುನಾ ಅವರ ಪ್ರಾರ್ಥನೆ ಭರತನಾಟ್ಯ ಗಮನ ಸೆಳೆಯಿತು. ಶಿಕ್ಷಕ ಹೀರೂ ನಾಯಕ ರೈತ ಗೀತೆ ಹಾಡಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ