Dharwad: District in-charge minister Santosh S Lad visited the areas of continuous rain and crop damage

ಧಾರವಾಡ: ನಿರಂತರ ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

ಧಾರವಾಡ: ನಿರಂತರ ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

ಧಾರವಾಡ, ಆಗಸ್ಟ್‌ 23: “ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ‌ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಬೆಳೆ ವಿಮೆ ಕಂಪನಿ ಮತ್ತು ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲಾಗುವುದು. ವಿಮಾ ಕಂಪನಿಯ ಕೆಲವು ನಿಯಮ‌ ಬದಲಾವಣೆ ಬಗ್ಗೆ ಸಭೆ ನಡೆಸಲಾಗುವುದು” ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು.

ಮಳೆಯಿಂದ ಹಾನಿಯಾದ ನವಲಗುಂದ ಪಟ್ಟಣದ ಮನೆಗಳು, ನಾಯಕನೂರ ಗ್ರಾಮದ ಹೊಲಗಳಲ್ಲಿನ ಹೆಸರು ಮತ್ತು ಈರುಳ್ಳಿ ಬೆಳೆಯನ್ನು ಸಚಿವರು ಇಂದು ಪರಿಶೀಲಿಸಿದರು.

ಅಣ್ಣಿಗೇರಿ ತಾಲೂಕಿನ ಮಣಕವಾಡ, ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಸುತ್ತಮುತ್ತಲಿನ ಜಮೀನುಗಳಿಗೆ ಹಾನಿಯಾಗಿರುವುದನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿಯೂ ಹಾನಿಗೊಳಗಾಗಿರುವ ಹೆಸರು, ಉದ್ದು, ಶೇಂಗಾ, ಈರುಳ್ಳಿ ಹಾಗೂ ಇತರ ಬೆಳೆಗಳ ಹಾನಿ ಪ್ರದೇಶಗಳನ್ನು ಪರಿವೀಕ್ಷಿಸಲಾಯಿತು. ಜೊತೆಗೆ ಮಳೆ ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ತಡಹಾಳ ಗ್ರಾಮದ ಸೇತುವೆಯನ್ನು ಇದೇ ವೇಳೆ ವೀಕ್ಷಿಸಿದರು.

ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಭಾರಿ ಮಳೆಗೆ ಹೆಚ್ಚಿನ ಬೆಳೆಯಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗಿದೆ. ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿದ್ದು, ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಹೊಲಗಳಲ್ಲಿ ನೀರು ನಿಂತಿದ್ದರಿಂದ ಬೆಳೆಗಳು ಕೊಳೆಯಲಾರಂಭಿಸಿವೆ. ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಸಮಗ್ರ ಮಾಹಿತಿ ಪಡೆಯಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನವಲಗುಂದ ಪಟ್ಟಣದ ಗುಡ್ಡದಕೇರಿ ಓಣಿಯಲ್ಲಿನ ದ್ಯಾಮವ್ವ ಬಣ್ಣೆಣ್ಣನವರ ಎಂಬವರ ಮನೆ ಮಳೆಗೆ ಸಂಪೂರ್ಣ ಹಾನಿಯಾಗಿತ್ತು. ಬಿದ್ದ ಮನೆ ವೀಕ್ಷಣೆ ಮಾಡಿದ ಸಚಿವ ಲಾಡ್ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಸಚಿವರಿಗೆ ಗ್ರಾಮಸ್ಥರ ಅಳಲು: ನವಲಗುಂದ ಭಾಗದಲ್ಲಿ ಹೆಸರು, ಈರುಳ್ಳಿ ಬೆಳೆ ಕಳೆದುಕೊಂಡು ಸಂಕಷ್ಟ ಎದುರಿಸುತ್ತಿರುವ ರೈತರು ಸಚಿವರ ಮುಂದೆ ಅಳಲನ್ನು ತೋಡಿಕೊಂಡರು. “ಸಾಲಸೋಲ ಮಾಡಿ ಬೆಳೆ ಹಾಕಿದ್ದೆವು. ಈಗ ನೋಡಿದರೆ ಮಳೆಯಿಂದ ಬೆಳೆ ಸಂಪೂರ್ಣ ಹಾನಿಯಾಗಿವೆ. ಸರ್ಕಾರದಿಂದ ಪರಿಹಾರ ಕೊಡಿಸಬೇಕು” ಎಂದು ಮನವಿ ಮಾಡಿದರು.

ತಡಹಾಳ ಗ್ರಾಮದ ಸೇತುವೆ ಪರಿಶೀಲನೆ: ತಡಹಾಳ ಬಳಿಯ ಬೆಣ್ಣೆಹಳ್ಳದಿಂದ ಉಂಟಾಗಿರುವ ನಷ್ಟದ ಕುರಿತು ಮಾತನಾಡಿದ ಸಚಿವರು, ಸೇತುವೆ ಹಳೆಯದಾಗಿದೆ. ಇದನ್ನು ಮೇಲ್ದರ್ಜೆಗೇರಿಸಲಾಗುವುದು. ಸದ್ಯ ತಾತ್ಕಾಲಿಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಬೆಣ್ಣೆಹಳ್ಳಕ್ಕೆ ಶಾಶ್ವತ ಸೇತುವೆ ನಿರ್ಮಾಣ ಮಾಡುವ ಕುರಿತು ಭರವಸೆ ನೀಡಿದರು.

ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಸೇತುವೆ ಹಾನಿಯಾಗಿದ್ದರಿಂದ ನರಗುಂದ ಹಾಗೂ ನವಲಗುಂದ ತಾಲೂಕಿನ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿತ್ತು.
ಕಳೆದ ಒಂದು ತಿಂಗಳ ಹಿಂದಷ್ಟೇ ಸೇತುವೆ ದುರಸ್ತಿ ಮಾಡಲಾಗಿತ್ತು. ಈ ಮುಂಚೆಯೂ ಸೇತುವೆ ಇದೇ ರೀತಿ ಕೊಚ್ಚಿಕೊಂಡು ಹೋಗಿತ್ತು. ಕೊಚ್ಚಿ ಹೋದ ಸೇತುವೆಯಿಂದ ಜನರಿಗೆ ಸಂಕಷ್ಟ ಎದುರಾಗಿತ್ತು.

ಭೇಟಿ ವೇಳೆ ಸಚಿವರಿಗೆ ನವಲಗುಂದ ಕ್ಷೇತ್ರದ ಶಾಸಕ ಎನ್. ಹೆಚ್. ಕೋನರಡ್ಡಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಾಥ್ ನೀಡಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ