Donate what you earn for the betterment of the poor - Darshanapura

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಮುದ್ದೇಬಿಹಾಳ : ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರ ಮುಖದಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೇತ್ರಗಳು ಮಾನವನಿಗೆ ಬಹುಮುಖ್ಯವಾದ ಅಂಗವಾಗಿದ್ದು ಅದಿಲ್ಲದಿದ್ದರೆ ಈ ಜಗತ್ತನ್ನು ಕಾಣುವುದಕ್ಕೆ ಸಾಧ್ಯವಿಲ್ಲ. ಕಣ್ಣು ಕಾಣದವರಿಗೆ ದೃಷ್ಟಿ ದೊರಕಿಸಿಕೊಡುವ ಕೆಲಸ ಮಾಡುತ್ತಿರುವ ಅಯ್ಯೂಬ ಮನಿಯಾರ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿರಿವಂತಿಕೆ ಬಂದಾಗ ದಾನ ಮಾಡಬೇಕು. ಕಣ್ಣುಗಳು ಇಲ್ಲದಿದ್ದರೆ ಮನುಷ್ಯ ಪರಾವಲಂಬಿ ಜೀವಿಯಾಗಬೇಕು. ನೇತ್ರದಾನ ಪವಿತ್ರ ದಾನವಾಗಿದೆ. ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳ ಪ್ರಯೋಜನ ಸಾರ್ವಜನಿಕರು ಪಡೆದುಕೊಳ್ಳಬೇಕು. ಈಗಿನ ಜನಾಂಗದವರ ಕಣ್ಣುಗಳು ಬೇಗನೇ ಹಾಳಾಗಲು ಮೊಬೈಲ್, ಟಿವಿ ಕಾರಣವಾಗಿದೆ ಎಂದರು.

ಇಳಕಲ್ ಪ್ರವಚನಕಾರ ಲಾಲಹುಸೇನ್ ಕಂದಗಲ್ ಮಾತನಾಡಿ, ಯಾರಿಗೆ ದುಡ್ಡಿನ ಮೇಲೆ ಪ್ರೀತಿ ಇದೆ ಸ್ವಾರ್ಥ ರಹಿತ ಸೇವೆಗಳನ್ನು ಮಾಡುವುದಿಲ್ಲ. ಬಡವರ ಏಳ್ಗೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಆದರೆ, ಸಮಾಜದಲ್ಲಿ ಪರಸ್ಪರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬೆಳಗಾವಿ, ಶಿವಮೊಗ್ಗದ ಶಾಲೆಯಲ್ಲಿ ನಮ್ಮ ಜಾತಿಯವನಲ್ಲ ಎಂಬ ಕಾರಣಕ್ಕೆ ಶಾಲೆಯ ಕುಡಿವ ನೀರಿನಲ್ಲಿ ವಿಷ ಬೆರೆಸುವ ಮಟ್ಟಿಗೆ ಧಾರ್ಮಿಕ ಅಸಹಿಷ್ಣುತೆ ಬೆಳೆದಿರುವುದು ಅಮಾಯಕ ಮಕ್ಕಳ ಜೀವಕ್ಕೆ ಆಪತ್ತು ತರುತ್ತದೆ. ಕ್ರೌರ್ಯತೆಯಿಂದ ಕರುಣೆ ಕಡೆಗೆ ಮನುಷ್ಯ ತೆರಳಬೇಕಿದೆ. ಕರುಣೆಯನ್ನು ತೋರಬೇಕು ಎಂಬುದನ್ನು ಮನಿಯಾರವರು ಕೈಗೊಳ್ಳುತ್ತಿರುವ ಕಾರ್ಯಗಳು ತೋರಿಸಿಕೊಡುತ್ತಿವೆ ಎಂದರು.

ಕಾರ್ಯಕ್ರಮದ ರೂವಾರಿ, ಮನಿಯಾರ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಅಯ್ಯೂಬ ಮನಿಯಾರ ಮಾತನಾಡಿ, ನಮ್ಮ ತಂದೆ ತಾಯಿ ಜೀವಂತ ಇಲ್ಲ. ಆದರೆ, ಬಡವರಿಗೆ ಇಂತಹ ಸೇವೆಗಳನ್ನು ಕೈಗೊಂಡಾಗ ಅವರು ಹರಸುವ ಆಶೀರ್ವಾದದಲ್ಲಿ ನನ್ನ ತಂದೆ ತಾಯಿಯನ್ನು ಕಾಣುತ್ತೇನೆ. ಅಕ್ಕತಂಗಿ, ಅಣ್ಣ ತಮ್ಮಂದಿರ ಜೊತೆಗಿನ ಸಂಬಂಧಗಳನ್ನು ಕಡಿದುಕೊಳ್ಳದೇ ಉಳಿಸಿಕೊಂಡು ನಗು ನಗುತ್ತ ಜೀವನ ನಡೆಸಿ ಎಂದು ಹೇಳಿದರು.

ಅನುಗ್ರಹ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಂಕರಗೌಡ ಹೊಸಮನಿ, ಬನಶ್ರೀ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರೂಪಸಿಂಗ ಲೋಣಾರಿ, ಉದ್ಯಮಿ ಮದನಸಾಬ ಸಾಲವಾಡಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಡಾ.ಎ.ಎ.ನಾಲಬಂದ, ಅಫ್ತಾಬ ಮನಿಯಾರ, ಎ.ಎಂ.ಎತ್ತಿನಮನಿ, ಮೈಬೂಬ ನಾಲತವಾಡ, ಆಯ್.ಎಲ್.ಮಮದಾಪೂರ, ಹಾಜಿಮಲಂಗ ಎಕಿನ್ ಇದ್ದರು. 500 ಜನರ ಕಣ್ಣಿನ ತಪಾಸಣೆ ನಡೆಸಿದ್ದರಲ್ಲಿ 200 ಜನಕ್ಕೆ ಉಚಿತವಾಗಿ ಕನ್ನಡ, ಔಷಧಿ ವಿತರಿಸಲಾಯಿತು. ನಿರ್ಗತಿಕರಿಗೆ ಮಾಸಿಕ ಪಿಂಚಣಿಯನ್ನು ನೀಡಲಾಯಿತು.

ವೀರೇಶ ವಾಲಿ ತಂಡದವರು ನಾಡಗೀತೆ ಹಾಡಿದರು. ಮುಜಾಹಿದ್ದ ನಮಾಜಕಟ್ಟಿ ಸ್ವಾಗತಿಸಿದರು. ಶೃತಿ ಜಾಧವ ನಿರೂಪಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ