ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ ವಿಮಾ ಕಂಪನಿಯವರು ಜಿಲ್ಲೆಯಲ್ಲಿ ಕ್ಲೇಮ ಪಾವತಿಸದೇ ಸದಾ ಕಾಲ ಮೋಸ ಮಾಡಿ‌ ನಿಗದಿಪಡಿಸಿದ ಇನ್ಸೂರೆನ್ಸ ಕಂಪನಿಯವರು ಬ್ರಹ್ಮಾಂಡ ಬ್ರಷ್ಟಾಚಾರದಲ್ಲಿ ತೊಡಗಿದ್ದು ತಕ್ಷಣ ಸರಕಾರ ಈ ಹಗರಣವನ್ನು ಸಿ.ಬಿ.ಐ ಇಲ್ಲವೆ ಸಿ.ಐ.ಡಿ ತನಿಖೆಗೊಳಪಡಿಸಿ ರೈತರಿಗೆ ಹಲವಾರು ವರ್ಷಗಳಿಂದ ಆಗಿರುವ ಮೋಸಕ್ಕೆ ನ್ಯಾಯ ದೊರಕಿಸಿಕೊಂಡಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಸರಕಾರಕ್ಕೆ ಒತ್ತಾಯಿಸಿದರು.

ಅವರು ನಗರದ ತಹಶೀಲ್ದಾರ ಕಚೇರಿ ಮುಂದೆ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಜಿಲ್ಲಾ ಘಟಕ ಹಾಗೂ ಇಲಕಲ್ ತಾಲೂಕು ಘಟಕದ ನೇತ್ರತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದ ನಂತರ ಮಾತನಾಡಿದರು.

ಇಲಕಲ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಾವರಗಿ ಮಾತನಾಡಿ, ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಬೆಳೆಗಳಾದ ಈರುಳ್ಳಿ, ಗೋವಿನಜೋಳ, ಸಜ್ಜೆ, ತೊಗರಿ, ಹೆಸರು,ಹತ್ತಿ, ಜೋಳ, ಮೆಣಸಿನಕಾಯಿ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ, ರೇಷ್ಮೆ ಇಲಾಖೆಯ ವಿವಿಧ ಬೆಳೆಗಳು ನೀರುಪಾಲಾಗಿದ್ದು, ರೈತರು ಈ ಬೆಳೆಗಳನ್ನು ಬೆಳೆಯಲು ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿದ್ದು, ರೈತರು ಸಂಕಷ್ಟದಲ್ಲಿ ಸಿಲುಕಿದ್ದು, ರೈತರಿಗೆ ಸರಕಾರ ಯಾವುದೇ ತಾಂತ್ರಿಕ ತೊಂದರೆ ನೆಪ ಹೇಳದೆ, ಸರಕಾರ ಬೆಳೆ ಹಾನಿಯಾದ ಜಮೀನಗಳ ಸಮೀಕ್ಷೆ ನಡೆಸಿ ನ್ಯಾಯೋಚಿತ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹ ಪಡಿಸಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ, ರೈತರಿಗೆ ಅತ್ಯಂತ ಲಾಭದಾಯಕವಾಗಿದ್ದು. ಆದರೆ, ಹೋಬಳಿವಾರು ಕೆಲವು ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಪಾವತಿಗೆ ಅವಕಾಶ ನೀಡಿದ್ದು ಎಲ್ಲ ಬೆಳೆಗಳಿಗೆ ವಿಮೆ ಪಾವತಿಸಲು ಅವಕಾಶ ನೀಡಬೇಕು. ಬೆಳೆ ವಿಮೆ ಪಾವತಿಸುವ ಅವಧಿಯನ್ನು ಮುಂದುವರೆಸಬೇಕು, ರೈತರಿಗೆ ಬೆಳೆ ವಿಮೆ ಬಗ್ಗೆ ಸರಕಾರ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಒತ್ತಾಯಿಸಿದರು.

ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ ಬೆಳೆಗಳಿಗೆ ಆರ್.ಸಿ.ಎಪ್.ಜೈಕಿಸಾನ್ ದ ಜುವಾರಿ ಯೂರಿಯಾ ರಸಗೊಬ್ಬರ ಕೊರತೆಯಾಗಿದ್ದು ಈಗ ಅವಶಕತೆ ಇದ್ದು ತಕ್ಷಣ ಪೂರೈಸಬೇಕು. ಅತಿವೃಷ್ಡಿಯಿಂದಾಗಿ ಮನೆಗಳು ಬೀಳುತ್ತಿದ್ದು ಮರು ನಿರ್ಮಾಣಕ್ಕೆ ಪರಿಹಾರ ಒದಗಿಸಬೇಕು.ಈ ಮೇಲ್ಕಾಣಿಸಿದ ಎಲ್ಲ ಬೇಡಿಕೆಗಳನ್ಬು ಶೀಘ್ರದಲ್ಲಿ ಈಡೇರಿಸಬೇಕೆಂದು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರೈತರು ಉಗ್ರಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಉಪಾಧ್ಯಕ್ಷ ಚಂದ್ರು ಗೌಡರ,ಪ್ರಧಾನ ಕಾರ್ಯದರ್ಶಿ ಮಂಜುನಾಥ ಗುಡಗುಂಟಿ, ದುರೀಣರಾದ ಬಸವರಾಜ ಅಂಗಡಿ,ಶರಷು ಗುಡಿಹಾಳ, ಬಸವರಾಜ ಕಂದಕೂರ, ರಾಚನಗೌಡ ಪಾಟೀಲ, ವೆಂಕಟೇಶ ಗದಗಿ, ವಿಶ್ವನಾಥ ಪಾಟೀಲ ಸೇರಿದಂತೆ ಅನೇಕರು ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ