SP visit to District Judge's house: Rs 30.14 lakh. Theft of valuable jewellery, cash

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋದ 14 ನೇ ಕ್ರಾಸ್ ನಲ್ಲಿರುವ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ ಕೌಶಿಕ್ ಅವರ ಬಾಡಿಗೆ ಇದ್ದ ಮನೆಯಲ್ಲಿ ಕಳ್ಳರು ಭಾನುವಾರ ಹಾಗೂ ಸೋಮವಾರದ ಮಧ್ಯೆದ ವೇಳೆಯಲ್ಲಿ ಕಳ್ಳತನ ಮಾಡಿದ್ದು ಚಿನ್ನ,ಬೆಳ್ಳಿ ಆಭರಣ ಹಾಗೂ ಡೈಮಂಡ್ ಮತ್ತು ನಗದು ಸೇರಿ ಒಟ್ಟು 30.14 ಲಕ್ಷ ರೂ.ಕಳ್ಳತನ ಮಾಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.

ಪಟ್ಟಣದ ಹುಡ್ಕೋದಲ್ಲಿರುವ ಜಿಲ್ಲಾ ನ್ಯಾಯಾಧೀಶರ ಮನೆಗೆ ಸೋಮವಾರ ಭೇಟಿ ನೀಡಿದ್ದ ಅವರು ಘಟನೆಯ ಕುರಿತು ನ್ಯಾಯಾಧೀಶರಿಂದ ಮಾಹಿತಿ ಪಡೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮನೆಯ ಬಾಗಿಲು ಮುರಿಯದೇ ಕೀ ಬಳಸಿ ಬಾಗಿಲು ತೆರೆದಿದ್ದು ಅಂದಾಜು 29.60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ಡೈಮಂಡ ಆಭರಣ, 4500 ರೂ.ಬೆಳ್ಳಿ ಗೆಜ್ಜೆ, 50 ಸಾವಿರ ರೂ. ನಗದು ಹಣ ಕಳ್ಳತನ ಮಾಡಿದ್ದಾರೆ ಎಂದು ನ್ಯಾಯಾಧೀಶರು ದೂರು ನೀಡಿದ್ದಾರೆ ಎಂದು ತಿಳಿಸಿದರು.

ಘಟನೆಯ ಕುರಿತು ಸಿಪಿಐ ಮೊಹ್ಮದ್ ಫಸಿಯುದ್ದೀನ್ ನೇತೃತ್ವ ಪಿಎಸ್‌ಐ ಸಂಜಯ ತಿಪರೆಡ್ಡಿ ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಶೀಘ್ರವೇ ಕಳ್ಳರನ್ನು ಪತ್ತೆ ಮಾಡುವುದಾಗಿ ತಿಳಿಸಿದರು. ಕಳ್ಳತನವನ್ನು ಪರಿಚಿತರಿಂದಲೇ ಆಗಿರುವ ಶಂಕೆ ಇದ್ದು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಟ್ರಾಫಿಕ್ ಸಿಗ್ನಲ್, ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ. ಪ್ರಸ್ತಾವನೆ: ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮುದ್ದೇಬಿಹಾಳ ಪಟ್ಟಣದ ಆಯಕಟ್ಟಿನ ಜಾಗೆಯಲ್ಲಿ ಟ್ರಾಫಿಕ್ ಸಿಗ್ನಲ್ ಆರಂಭಿಸಲು ಹಾಗೂ ಅತ್ಯಾಧುನಿಕ ಕ್ಯಾಮೆರಾ ಅಳವಡಿಕೆಗೆ ಸರ್ಕಾರಕ್ಕೆ ಒಂದು ಕೋಟಿ ರೂಪಾಯಿ ಪ್ರಸ್ತಾವನೆಯನ್ನು ಪೊಲೀಸ್ ಇಲಾಖೆಯಿಂದ ಸಲ್ಲಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ಈಗಿರುವ ಕ್ಯಾಮೆರಾಗಳಲ್ಲಿ ಹಗಲು ಹೊತ್ತಿನಲ್ಲಿ ವಾಹನಗಳ ನಂಬರ್ ಗುರುತು ಸಿಗುವುದಿಲ್ಲ. ಆದ್ದರಿಂದ ಟ್ರಾಫಿಕ್ ಸಿಗ್ನಲ್, ಜನರ ಮುಖಚರ್ಯೆ ಗುರುತಿಸುವ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲು ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಇಲ್ಲಿನ ಶಾಸಕರು ಶಾಸಕರ ವಿಶೇಷ ನಿಧಿಯಡಿ ಅನುದಾನ ಒದಗಿಸುವುದಾಗಿ ತಿಳಿಸಿದ್ದಾರೆ ಎಂದರು.

ಇಲ್ಲಿನ ಹುಡ್ಕೋದಲ್ಲಿ 50 ಲಕ್ಷ ರೂ. ಕೆಳಗಡೆ ಮನೆಗಳಿಲ್ಲ. ಆದರೆ, 10 ಸಾವಿರ ಖರ್ಚು ಮಾಡಿ ಸಿಸಿಟಿವಿ ಹಾಕುವುದಕ್ಕೆ ಸಾರ್ವಜನಿಕರು ಹಿಂದೇಟು ಹಾಕುತ್ತಾರೆ. ಜನಸ್ನೇಹಿ ಪೊಲೀಸ ಎಂದರೆ ನಾಗರಿಕರು ಇಂತಹ ಸಹಕಾರವನ್ನು ಪೊಲೀಸರಿಗೆ ಮಾಡಬೇಕು. ಇಂತಹ ಘಟನೆಗಳು ನಡೆದಾಗ ಕಳ್ಳರನ್ನು ಗುರುತು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ. ಒಬ್ಬರಿಗೆ ಕಷ್ಟವಾದರೆ 10-20 ಮನೆಗಳ ಮಾಲೀಕರು ಸೇರಿಕೊಂಡು ಸಿಸಿಟಿವಿ ಅಳವಡಿಸುವ ಕುರಿತು ಚಿಂತನೆ ನಡೆಸಬೇಕು ಎಂದು ಎಸ್ಪಿ ತಿಳಿಸಿದರು. ಸಿಪಿಐ ಮೊಹ್ಮದ್ ಫಸಿಯುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ,ಅಪರಾಧ ವಿಭಾಗದ ಪಿಎಸೈ ಆರ್.ಎಲ್.ಮನ್ನಾಭಾಯ ಇದ್ದರು.

ಟ್ರಾಫಿಕ್ ಸಿಗ್ನಲ್,ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ -ಶಾಸಕ ನಾಡಗೌಡ : ಅಪರಾಧ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲು ಸಿಸಿಟಿವಿ, ಟ್ರಾಫಿಕ್ ಸಿಗ್ನಲ್ ಅಳವಡಿಸಲು ಶಾಸಕರ ವಿಶೇಷ ಅನುದಾನದಡಿ ಪೊಲೀಸ್ ಇಲಾಖೆಗೆ ಒಂದು ಕೋಟಿ ರೂ.ಅನುದಾನ ನೀಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾ ನ್ಯಾಯಾಧೀಶರ ಮನೆ ಕಳ್ಳತನ ಕುರಿತು ನನ್ನೊಂದಿಗೆ ಪೊಲೀಸರು ಚರ್ಚೆ ನಡೆಸಿಲ್ಲ. ಅಪರಾಧಿಗಳನ್ನು ತ್ವರಿತವಾಗಿ ಬಂಧಿಸುವಂತೆ ತಿಳಿಸಿದ್ದಾಗಿ ಶಾಸಕರು ಹೇಳಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ