ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ ಸಾರ್ವಜನಿಕರು ಸಮಸ್ಯೆಗಳ ಅರ್ಜಿಯ ಜೊತೆಗೆ ಬಂದಿದ್ದರು ಸಣ್ಣ ಪುಟ್ಟ ಸಮಸ್ಯೆಗಳಿಗೆ ಶಾಸಕರು ಅಧಿಕಾರಿಗಳಿಗೆ ಕಚೇರಿಯಿಂದಲೇ ಕರೆ ಮಾಡಿ ಇತ್ಯರ್ಥ ಮಾಡಿದರು ಮನೆ ಇಲ್ಲದವರು, ಅನಾರೋಗ್ಯ ಪೀಡಿತರು, ವಿದ್ಯುತ್ ಸಂಪರ್ಕ, ನಿರುದ್ಯೋಗಿಗಳು, ಮನೆ ದುರಸ್ತಿ, ಕಲಿಕೆಗೆ ನೆರವು ಸೇರಿದಂತೆ ಅನೇಕ ಮಂದಿ ತಮ್ಮ ಅಹವಾಲನ್ನು ಶಾಸಕರ ಮುಂದೆ ಹೇಳಿಕೊಂಡರು. ವೃದ್ಧರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.
ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಅ ಕಾರ್ಯಕ್ರಮದಿಂದ ರೈತರು, ಜನಸಾಮಾನ್ಯರು ಜಿಲ್ಲಾ ಮತ್ತು ತಾಲೂಕು ಕೇಂದ್ರಕ್ಕೆ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ರವೀಂದ್ರನಾಥ್, ಮುಂತಾದವರು ಇದ್ದರು.