ಪಿಕೆಪಿಎಸ್ ಸಿಇಒಗಳಿಗೆ ತರಬೇತಿ: ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಪಿಕೆಪಿಎಸ್ ಸಿಇಒಗಳಿಗೆ ತರಬೇತಿ: ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಉದ್ದೇಶಕ್ಕೆ ಅಷ್ಟೇ ಸಾಲ ಕೊಡುವುದಕ್ಕೆ ಸಿಮೀತವಾಗದೇ ಅನ್ಯ ಉದ್ದೇಶಕ್ಕೂ ಸಾಲ ಸೌಲಭ್ಯ ಒದಗಿಸಬೇಕು ಎಂದು ವಿಡಿಸಿಸಿ ಬ್ಯಾಂಕ್ ಅಭಿವೃದ್ದಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು.

ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಈಚೇಗೆ ಏರ್ಪಡಿಸಿದ್ದ ತಾಲ್ಲೂಕು ಪ್ಯಾಕ್ಸುಗಳ ಮಟ್ಟದಲ್ಲಿ ವ್ಯಾಪಾರ ಅಭಿವೃದ್ದಿ ಯೋಜನೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವ್ಯಾಪಾರ ಅಭಿವೃದ್ಧಿಯ ಜಿಲ್ಲೆಯಲ್ಲಿ ಪ್ಯಾಕ್ಸ್ ಮಟ್ಟದಲ್ಲಿ ಉತ್ತಮವಾಗಿ ಪ್ರಗತಿಯಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ರಾಷ್ಟಿçÃಕೃತ ಬ್ಯಾಂಕುಗಳAತೆ ಉತ್ತಮ ಸೇವೆ ನೀಡಬೇಕು.ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಪಿಕೆಪಿಎಸಗಳ ಮೂಲಕ ಸೂಪರ್ ಬಜಾರ್, ಗೊಬ್ಬರ ವ್ಯಾಪಾರ,ಜನೌಷಧಿ ಕೇಂದ್ರ ಹೀಗೆ ಬ್ಯಾಂಕೇತರ ಚಟುವಟಿಕೆಗಳಿಗೆ ಒತ್ತು ನೀಡಿ ಗ್ರಾಮದ ಜನರಿಗೆ ಅನುಕೂಲಕರ ಸೇವೆಗಳನ್ನು ಪ್ಯಾಕ್ಸಗಳಿಂದಲೇ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಆರ್.ಬಿ.ಗುಡದಿನ್ನಿ ಮಾತನಾಡಿ, ಬಿಡಿಪಿ ವ್ಯವಹಾರವನ್ನು ಕಡ್ಡಾಯವಾಗಿ ಪಿಕೆಪಿಎಸ್‌ಗಳ ವ್ಯಾಪ್ತಿಯಲ್ಲಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು.43 ಪ್ಯಾಕ್ಸುಗಳು ಗಣಕೀಕೃತವಾಗುವ ಹಂತದಲ್ಲಿದ್ದು ಬೆಳೆಸಾಲ ಮಾತ್ರವಲ್ಲದೇ ಎಲ್ಲ ರೀತಿಯ ಸಾಲಗಳನ್ನು ವಿತರಿಸಬೇಕು ಎಂದು ತಿಳಿಸಿದರು.
ಕುದರಿ ಸಾಲವಾಡಗಿ ಮಾಜಿ ಕಾರ್ಯದರ್ಶಿ ಮಲ್ಲಣ್ಣ ಅಣೆಪ್ಪನವರ ಮಾತನಾಡಿದರು.ಆಡಳಿತ ಮಂಡಳಿ ಸಲಹೆಗಾರ ಜೆ.ಕೊಟ್ರೇಶಿ, ಮಾಜಿ ನಿರ್ದೇಶಕ ಎಸ್.ಬಿ.ಪಾಟೀಲ, ಸಹಾಯಕ ನಿಬಂಧಕ ಚೇತನ ಭಾವಿಕಟ್ಟಿ,ತರಬೇತಿ ಸಂಯೋಜಕ ಆರ್.ಎಂ.ಬಣಕಾರ, ಉಪಪ್ರಧಾನ ವ್ಯವಸ್ಥಾಪಕ ಎಂ.ಜಿ.ಬಿರಾದಾರ,ಮುಖAಡ ಸೋಮನಗೌಡ ಬಿರಾದಾರ,ಮುದ್ದೇಬಿಹಾಳ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪಿ.ಎಸ್.ಪಾಟೀಲ, ನೋಡಲ ಅಧಿಕಾರಿ ಎನ್.ಜಿ.ಜನಿವಾರ,ಮಲ್ಲಣ್ಣ ಅಗಸರ,ಸಿ.ಬಿ.ಮಲಘಾಣ ಮೊದಲಾದವರು ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ