ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಯಲ್ಲಾಲಿಂಗೇಶ್ವರ ಮಠದಲ್ಲಿ ನವರಾತ್ರೋತ್ಸವದಂಗವಾಗಿ ಅ.6ರಂದು ಬೆಳಗ್ಗೆ 11ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಯರಝರಿ ಮಲ್ಲಾರಲಿಂಗ ¸ಸ್ವಾಮೀಜಿಯವರ ಗುರುವಂದನಾ ಹಾಗೂ ತುಲಾಭಾರ ಕಾರ್ಯಕ್ರಮ ಜರುಗಲಿದ್ದು ಸನ್ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ.,ಪಿಯುಸಿಯಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ.ನಂತರ ದಸರಾ ದರ್ಬಾರ ಉತ್ಸವ ಜರುಗಲಿದೆ ಎಂದು ಜಾತ್ರಾ ಕಮೀಟಿಯ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.