Accident news Accident board on road

Accident: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. ಪ್ರತ್ಯೇಕ ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. ಪ್ರತ್ಯೇಕ ಅಪಘಾತದಲ್ಲಿ ನಾಲ್ವರ ದುರ್ಮರಣ

ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿಗೆ ಪಾದಯಾತ್ರೆ ಹೊರಟಿದ್ದವರ ಮೇಲೆ ಖಾಸಗಿ ಸ್ವೀಪರ್ ಕೋಚ್ ಬಸ್ ಹರಿದು (Accident) ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ನಾಲ್ವರು ಭಕ್ತರು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮಂಗಳವಾರ ನಡೆದಿದ್ದು, ಮತ್ತೊಂದು ಪ್ರಕರಣದಲ್ಲಿ ಬೈಕ್‌ ಡಿಕ್ಕಿಯಾಗಿ ಪಾದಯಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದ ಅನ್ನಪೂರ್ಣ(40), ಪ್ರಕಾಶ್(25), ಶರಣಪ್ಪ(19) ಮೃತರು. ಇವರ ಮೇಲೆ ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ವೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ ಹರಿದ ಪರಿಣಾಮ ಈ ಘಟನೆ ಸಂಭವಿಸಿದೆ.

ಕಳೆದ ಎರಡು ದಿನಗಳ ಹಿಂದೆ ತಮ್ಮ ಗ್ರಾಮದಿಂದ ಹುಲಗಿಯ ಹುಲಿಗೇಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದರು. ಇನ್ನು ಕೇವಲ 3 ಗಂಟೆ ಕಳೆದರೆ ಹುಲಿಗೇಮ್ಮ ದೇವಸ್ಥಾನವನ್ನು ಪಾದಯಾತ್ರಿಗಳು ತಲುಪುತ್ತಿದ್ದರು. ಆದರೆ, ಅದಕ್ಕೂ ಪೂರ್ವದಲ್ಲಿಯೇ ದುರ್ಘಟನೆ ನಡೆದಿದೆ.

ಘಟನೆಯಲ್ಲಿ ನಾಲ್ಕು ಜನರಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ