More importance for education, health and housing facilities of workers' children: Minister Lad

ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ: ಸಚಿವ ಲಾಡ್

ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ: ಸಚಿವ ಲಾಡ್

ತುಮಕೂರು ಅ.8: ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಅವರು ಬುಧವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ, ಈ ಕಾರ್ಮಿಕ ಭವನವನ್ನು ನಿರ್ಮಿಸಲಾಗಿದ್ದು, ಭವನವು ಮುಂದಿನ ದಿನಗಳಲ್ಲಿ ಕಾರ್ಮಿಕರ ಸಭೆ, ತರಬೇತಿ ಶಿಬಿರಗಳಿಗೆ ಉತ್ತಮ ವೇದಿಕೆಯಾಗಿ ಉಪಯೋಗವಾಗಲಿದೆ ಎಂದು ತಿಳಿಸಿದರು.

ಕಾರ್ಮಿಕ ವರ್ಗದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆಯಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ, ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್ ಹಾಗೂ ಹೆಚ್.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ ಜಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ