MLA Nad Gowda Ranathantra: Unopposed choice for TAPCMS of Muddebiha

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು.

ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ಗುರುಲಿಂಗಪ್ಪ ಹಡಲಗೇರಿ(ಕೊಣ್ಣೂರ), ಬಸವರಾಜ ಬಗಲಿ(ತಮದಡ್ಡಿ), ಮಹಿಳಾ ವರ್ಗದಿಂದ ವನಮಾಲಾ ಮೇಟಿ(ಹಂದ್ರಾಳ), ಮಲ್ಲಮ್ಮ ಪಾಟೀಲ(ಗುಂಡಕರ್ಜಗಿ), ಹಿಂದುಳಿದ ಅ ವರ್ಗದಿಂದ ಮುತ್ತಪ್ಪ ಮುತ್ತಣ್ಣವರ(ಮಸೂತಿ), ಹಿಂದುಳಿದ ಬ ವರ್ಗದಿಂದ ಮನೋಹರ ಮೇಟಿ(ಬಸರಕೋಡ), ಪರಿಶಿಷ್ಟ ಜಾತಿ ವರ್ಗದಿಂದ ಚಿದಾನಂದ ಸೀತಿಮನಿ(ಕೋಳೂರ), ಎಸ್.ಟಿ ವರ್ಗದಿಂದ ಗುರಣ್ಣ ಹತ್ತೂರ(ಕೊಣ್ಣೂರ), ಅ ವರ್ಗದ ಸಂಘಗಳ ಮತಕ್ಷೇತ್ರದಿಂದ ತಂಗಡಗಿ ಪಿಕಪಿಎಸ್‌ನ ಬಸವರಾಜ ಇಸ್ಲಾಂಪೂರ, ಹುಲ್ಲೂರ ಪಿಕೆಪಿಎಸ್‌ನ ಸುರೇಶ ಹಳೇಮನಿ, ಗುಂಡಕನಾಳ ಪಿಕೆಪಿಎಸ್‌ನ ಮಲ್ಲನಗೌಡ ಬಿರಾದಾರ, ಢವಳಗಿ ಪಿಕೆಪಿಎಸ್‌ನಿಂದ ನೀಲಕಂಠಗೌಡ ಗೌಡರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಅ ವರ್ಗದಿಂದ 16 ಜನ ನಾಮಪತ್ರ ಸಲ್ಲಿಸಿದವರ ಪೈಕಿ 12 ಜನ ನಾಮಪತ್ರ ವಾಪಸ್ ಪಡೆದುಕೊಂಡರೆ, ಬ ವರ್ಗದಿಂದ 26 ಜನರಲ್ಲಿ 18 ಜನ ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡರು ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದರು.

ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದ ಶಾಸಕ ಸಿ.ಎಸ್.ನಾಡಗೌಡ, ನನ್ನ ರಾಜಕೀಯ ಜೀವನ ಆರಂಭವಾಗಿದ್ದೇ ಟಿಎಪಿಸಿಎಂಎಸ್‌ನಿಂದ, ಹಿರಿಯರು ಚುನಾವಣಾ ಕಣದಲ್ಲಿ ನನ್ನನ್ನು ಉಳಿಸಿ ಬೆಳೆಸಿದ್ದರಿಂದ ಜನಸೇವೆಗೆ ಮುಂದಾಗಿದ್ದೇನೆ. ಇದು ಕೃಷಿಕರ ಕ್ಷೇತ್ರವಾಗಿದ್ದು ಇಲ್ಲಿ ಆ ಪಕ್ಷ ಈ ಪಕ್ಷ ಎಂದು ರಾಜಕಾರಣ ಮಾಡುವುದಿಲ್ಲ. ಬಿಜೆಪಿಯ ಪ್ರಭುಗೌಡ ದೇಸಾಯಿ, ಆರ್.ಎಸ್.ಪಾಟೀಲ ಕೂಚಬಾಳ ಅವರ ಪಾತ್ರವೂ ಅವಿರೋಧ ಆಯ್ಕೆಯಲ್ಲಿ ಇದೆ. ಟಿಎಪಿಸಿಎಂಎಸ್‌ನಲ್ಲಿರುವುದು ಈಗ ಪಕ್ಕಾ ಕಾಂಗ್ರೆಸ್. ಕಾಂಗ್ರೆಸ್ ಎಂದರೆ ಎಲ್ಲ ಜಾತಿ, ಜನಾಂಗ, ಪಕ್ಷದವರನ್ನು ಜೊತೆಗೂಡಿ ಕರೆದುಕೊಂಡು ಹೋಗುವುದಾಗಿದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಸುರೇಶಗೌಡ ಪಾಟೀಲ ಇಂಗಳಗೇರಿ, ಶ್ರೀಶೈಲ ಮರೋಳ, ರಾಜುಗೌಡ ಕೊಂಗಿ, ಸಂತೋಷ ಚವ್ಹಾಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎಸ್.ಪಾಟೀಲ, ಬಾಪುಗೌಡ ಪೀರಾಪೂರ, ಅಪ್ಪುಗೌಡ ನಾಡಗೌಡ ಸೇರಿದಂತೆ ಹಲವರು ಇದ್ದರು. ಸಹಾಯಕ ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆ ಅಧಿಕಾರಿ ಸಂತೋಷ ಇಲಕಲ್, ಟಿಎಪಿಸಿಎಂಎಸ್ ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ ಇದ್ದರು.

ಫಲಿಸಿದ ನಾಡಗೌಡರ ರಣತಂತ್ರ: ಶಾಸಕ ಸಿ.ಎಸ್.ನಾಡಗೌಡ ಅವರು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಕೂರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮುಂಚೆ ಮಾಜಿ ಅಧ್ಯಕ್ಷ ಎಂ.ಎಸ್. ಮೇಟಿ ಅವರ ಹಿಡಿತದಲ್ಲಿದ್ದ ಟಿಎಪಿಸಿಎಂಎಸ್ ಆಡಳಿತದ ಅಧ್ಯಕ್ಷ ಸ್ಥಾನದ ಚುಕ್ಕಾಣಿ ಈ ಬಾರಿ ಯಾರ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ