Many measures for social security of unorganized sector workers: Minister Lad

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು.

ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್ ಹಾಲ್ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಯಾದಗಿರಿ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೂರಾರು ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸುಮಾರು 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ತಕ್ಷಣ ಉಚಿತವಾಗಿ ನೋಂದಾಯಿಸಿಕೊಂಡು, ಸ್ಮಾರ್ಟ್ ಕಾರ್ಡ್ ಪಡೆದು ಸವಲತ್ತುಗಳ ಲಾಭ ಪಡೆಯುವಂತೆ ಸಲಹೆ ನೀಡಿದರು.

ರಾಜ್ಯದ ದುಡಿಯುವ ಜನರಲ್ಲಿ ಅಸಂಘಟಿತ ವಲಯದ ಪ್ರತಿಶತ 85 ರಷ್ಟು ಕಾರ್ಮಿಕರಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ ಯನ್ನುಅನುಷ್ಠಾನಗೊಳಿಸಲಾಗಿದೆ ಎಂದರು.

ಈ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 35 ಲಕ್ಷ ಕಾರ್ಮಿಕರು ಒಳಗೊಂಡಿದ್ದಾರೆ. ಅವರಿಗೆ ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ ಎಂದರು.

ಯಾದಗಿರಿ ಜಿಲ್ಲೆಯಲ್ಲಿ 59,493 ಕಾರ್ಮಿಕರು ನೊಂದಣಿಯಾಗಿದ್ದು ಅವರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇಂತಹ ಅಸಂಘಟಿತ ಕಾರ್ಮಿಕರ ಅಪಘಾತ ಸಂಭವಿಸಿದಲ್ಲಿ 1 ಲಕ್ಷ ಪರಿಹಾರ ನೀಡಲಾಗುವುದು. ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ 4 ಲಕ್ಷದವರೆಗೆ ವಿಮಾ ಸೌಲಭ್ಯ ನೀಡಲಾಗುವುದು. ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಉದ್ಯೋಗದಾತರು, ಉದ್ದಿಮೆದಾರರು ಉದ್ಯೋಗ ನೀಡಿದಲ್ಲಿ ಶೇ.50 ರಷ್ಟು ವೇತನ ಕಾರ್ಮಿಕ ಇಲಾಖೆಯಿಂದಲೇ ಭರಿಸಲಾಗುವುದೆಂದರು.

ಮೋಟಾರು ಸಾರಿಗೆ ಹಾಗೂ ಸಂಬಂಧಿತ ಕಾರ್ಮಿಕರಿಗೆ ಮತ್ತು ಸಿನಿ ಪರದೆ ಹಿಂದೆ ದುಡಿಯುವ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರಿಗೆ, ಕಲಾವಿದರಿಗೆ, ಸಾಮಾಜಿಕ ಭದ್ರತೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ) ಅಧಿನಿಯಮ ರೂಪಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.

ದೇಶದಲ್ಲಿ ಅದರಲ್ಲಿಯೂ ಕರ್ನಾಟಕದಲ್ಲಿ ಬದಲಾವಣೆ ತರಲು ಸರ್ಕಾರ ಪಂಚಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ.ಪ್ರತಿ ವರ್ಷ 60 ಸಾವಿರ ಕೋ ರೂ ಗಳಂತೆ ಒಟ್ಟು 5 ವರ್ಷದಲ್ಲಿ 5 ಲಕ್ಷ.ಕೋ.ರೂ ಒದಗಿಸುತ್ತಿದೆ. ಅಭಿವೃದ್ಧಿ, ಯೋಜನೆ, ಯೋಜನೆತರ, ಪೆನ್ಷನ್ ಯೋಜನೆಗಳಿಗೂ ಅನುದಾನ ಒದಗಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪರ್ ಕ್ಯಾಪಿಟಾ ಇನ್ಕಮ್ ಹಾಗೂ ಜಿಡಿಪಿ ಯಲ್ಲಿ ರಾಷ್ಟ್ರ ದಲ್ಲಿ ಮುಂಚೂಣಿ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.500 ಕೋ.ಜನರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ವಿಶ್ವದ ಏಕೈಕ ರಾಜ್ಯ ಕರ್ನಾಟಕ ವಾಗಿದೆ ಎಂದು ಹೇಳಿದರು.

ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸಹಾಯಹಸ್ತ ಚಾಚಿ ಅವರಿಗೆ ಮುಖ್ಯ ವಾಹಿನಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ನೋಂದಣಿ ಮಾಡಿಕೊಳ್ಳುವದು ಮುಖ್ಯ ಎಂದ ಅವರು ಈ ಭಾಗದ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಭೀ.ಗುಡಿಗೆ ವಸತಿ ಶಾಲೆಯೊಂದು ಮಂಜೂರು ಆಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.ಅದರಂತೆ ಈ ಭಾಗದ ಸಮಸ್ಯೆಯಾಗಿರುವ ಕಾರ್ಮಿಕರ ಗುಳೆ ಸಮಸ್ಯೆ ಪರಿಹರಿಸಲು ಎಲ್ಲರೂ ಸಂಘಟಿತರಾಗಿ ಶ್ರಮಿಸುವುದು ಮುಖ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್, ವಿಧಾನ ಪರಿಷತ್ ಸದಸ್ಯ ಶ್ರೀ ತಿಪ್ಪಣ್ಣ ಕಮತನೂರ್, ಶಾಸಕ ಶರಣಗೌಡ ಕಂದಕೂರ ಅವರು ಕಾರ್ಮಿಕ ಸಚಿವ ಶ್ರೀ ಸಂತೋಷ್ ಲಾಡ್ ಅವರು ಕಾರ್ಮಿಕರ ಪರ ಕಾರ್ಯ ವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವಡಗೇರಾ ಹಾಗೂ ಗುರುಮಠಕಲ್ ಗೆ ಕಾರ್ಮಿಕ ಮಕ್ಕಳಿಗಾಗಿ ವಸತಿ ಶಾಲೆ ಮಂಜೂರು ಮಾಡುವಂತೆ ಸಚಿವರಿಗೆ ಕೋರಿದರು.

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕ ರಾಜಾ ವೇಣುಗೋಪಾಲ್ ನಾಯಕ, ನಗರಸಭೆ ಅಧ್ಯಕ್ಷ ಲಲಿತಾ ಅನಪುರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್,
ಡಿಸಿ ಹರ್ಷಲ್ ಭೋಯರ್,ಜಿ.ಪಂ.ಸಿಇಓ ಲವೀಶ್ ಒರಡಿಯಾ,ಎಸ್.ಪಿ ಪೃಥ್ವಿಕ್ ಶಂಕರ್, ಲಿಡ್ಕರ್ ಸಂಸ್ಥೆ ಅಧ್ಯಕ್ಷ ಮುಂಡರಗಿ ನಾಗರಾಜ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಜಂಟಿ ಆಯುಕ್ತ ರವಿಕುಮಾರ್, ಇತರೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಆಶಾದೀಪ ಯೋಜನೆಯಡಿ ವೇತನ ಮರುಪಾವತಿ ಚೆಕ್ ವಿತರಣೆ, ಖಾಸಗಿ ವಾಹನ ಚಾಲಕರ ಅಪಘಾತ ಮರಣ ಪರಿಹಾರ ಧನ ಸಹಾಯ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ