ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ.
ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ.
ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಬಸಮ್ಮ ಚೆನ್ನಪ್ಪ ಕೊಣ್ಣೂರ(21), ಸಂತೋಷ ಚೆನ್ನಪ್ಪ ಕೊಣ್ಣೂರ(16), ಹಾಗೂ ರವಿ ಹಣಮಂತ ಕೊಣ್ಣೂರ (15) ಕಾಲುವೆಯಲ್ಲಿ ಜಾರಿ ಬಿದ್ದು ಮುಳುಗಿದವರು ಎಂದು ಪೊಲೀಸರು ತಿಳಿಸಿದ್ದಾರೆ.
ಶೋಧ ಕಾರ್ಯ ಮುಂದುವರೆದಿದೆ.ಘಟನಾ ಸ್ಥಳಕ್ಕೆ ಸಿಪಿಐ ಮೊಹ್ಮದ ಫಸಿವುದ್ದೀನ , ಪಿಎಸ್ಐ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದಾರೆ.







