ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ರಸ್ತೆಯಲ್ಲಿರುವ ಕೆಬಿಜೆಎನ್‌ಎಲ್ ಎಡದಂಡೆ ಕಾಲುವೆಗೆ ಜಾರಿ ಬಿದ್ದಿದ್ದ ಮೂವರ ಪೈಕಿ ಇನ್ನಿಬ್ಬರ ಮೃತದೇಹಗಳು ಬುಧವಾರ ಬೆಳಗ್ಗೆ ಪತ್ತೆಯಾಗಿವೆ.
ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆ ವೇಳೆ ಬೆಳಗ್ಗೆಯೇ ಬಸಮ್ಮ ಕೊಣ್ಣೂರ ಹಾಗೂ ರವಿ ಕೊಣ್ಣೂರ ಮೃತದೇಹಗಳನ್ನು ಹೊರಕ್ಕೆ ತೆಗೆದು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಲಾಯಿತು.
ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಟ್ಟೆ ತೊಳೆಯಲೆಂದು ಹೋಗಿದ್ದ ಬಸಮ್ಮ ಕಾಲು ಜಾರಿ ಬಿದ್ದಾಗ ಆಕೆಯನ್ನು ರಕ್ಷಿಸಲು ಹೋದ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಮೃತರ ತಂದೆ ಚೆನ್ನಪ್ಪ ಮಕ್ಕಳ ಸಾವಿನಲ್ಲಿ ಯಾವುದೇ ಸಂಶಯವಿಲ್ಲ.ಅವರು ಕಾಲುವೆಗೆ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.







