Basanna leader visits special 'tax collection campaign' for debt collection in village panchayats

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ “ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ ಪಂಚಾಯಿತಿಗೆ ಸಲ್ಲಿಕೆ ಆಗಬೇಕಾಗಿರುವ ತೆರಿಗೆಯಲ್ಲಿ ಶೇ.100ರಷ್ಟು ವಸೂಲಿ ಮಾಡುವುದು ಗ್ರಾಮ ಪಂಚಾತಿಯ ಪ್ರಾಥಮಿಕ ಹೊಣೆಗಾರಿಕೆಯಾಗಿರುತ್ತದೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೂಢೀಕರಿಸಿಕೊಳ್ಳಲು ಕರವಸೂಲಾತಿ ಅಭಿಯಾನದ ಪ್ರಕ್ರಿಯೆಯನ್ನು ಒಂದು ವಿಶೇಷ ಅಂದೋಲನವನ್ನಾಗಿ ನಡೆಸಬೇಕಾಗಿರುತ್ತದೆ.

ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ತಂಡವನ್ನು ರಚಿಸಿ, ಕಡ್ಡಾಯವಾಗಿ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಬೇಕು.

ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಂಠಿತವಾಗಿರುವ ಕಂದಾಯ ವಸೂಲಾತಿ ಪ್ರಗತಿಯನ್ನು ಹೆಚ್ಚಿಸುವ ಹಿನ್ನಲೆಯಲ್ಲಿ ಕೂಡಲೇ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಂಡು ಪ್ರಗತಿ ಸಾಧಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕಂದಾಯ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು. ತಪ್ಪಿದ್ದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ನಾಯಕ ತಿಳಿಸಿದ್ದಾರೆ.

ಜಿ.ಪಂ. ಸಿಇಒ ಅವರ ನಿರ್ದೇಶನದಂತೆ ಗ್ರಾಮ ಪಂಚಾಯತಿಗಳನ್ನು ಸಶಕ್ತಗೊಳಿಸುವ ಉದ್ದೇಶದಿಂದ ನಮ್ಮ ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೆ ಕರ ವಸೂಲಾತಿ ಆಂದೋಲನ ಪ್ರಾರಂಭವಾಗಿದ್ದು, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು, ಬಸಣ್ಣ ನಾಯಕ ಸರ್ ರವರು ಭೇಟಿ ನೀಡಿ, ವಿಶೇಷ ಕರ ವಸೂಲಾತಿ ಅಭಿಯಾನದ ಪ್ರಕ್ರಿಯೆನ್ನು ವೀಕ್ಷಿಸಿದರು ನಂತರ ಮನೆ ಮನೆಗೆ ಹಾಗೂ ಅಂಗಡಿ ಮುಗಟ್ಟುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಕರ ವಸೂಲಿಯ ಬಗ್ಗೆ ಮಾಹಿತಿ ನೀಡಿ ಪಂಚಾಯತ್ ಸಿಬ್ಬಂದಿಗಳಿಗೆ ಹೆಚ್ಚು ಕರ ಸಂಗ್ರಹಣಿ ಮಾಡುವಂತೆ ತಿಳಿಸಿದರು. ಮುದನೂರ, ಕನ್ನಳ್ಳಿ, ಹೆಬ್ಬಾಳ, ರಾಜನಕೊಳೂರ, ಗ್ರಾಮ ಪಚಾಯತಿಗೆ ಬೆಟ್ಟಿ ನೀಡಿದರು.

ವರದಿ : ಶಿವು ರಾಠೋಡ

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ