They laid siege to the taluk agriculture office demanding to solve the problems of the farmers

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಾಕಾರರು, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಧನವನ್ನು ರೈತರ ಖಾತೆಗೆ ತಕ್ಷಣವೇ ಜಮಾ ಮಾಡಬೇಕೆಂದು ಆಗ್ರಹಿಸಿದರು.

ಹಾಲು ಉತ್ಪಾದಕರಿಗೆ ಪ್ರತಿ ಲಿಟರ್‌ಗೆ 5 ರೂ. ಪ್ರೋತ್ಸಾಹ ಧನದ ಬಾಕಿ ಇರುವ 62೦ ಕೋಟಿ ರೂ. ಅನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಈ ಪ್ರೋತ್ಸಾಹ ಧನವನ್ನು 7 ರೂ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 3,3೦೦ ದರವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾನವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಜೊತೆಗೆ, ಹಿಂದಿನಂತೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಭಾಗವಾಗಿ ರಾಜ್ಯ ಸರ್ಕಾರದಿಂದ ಪ್ರತಿ ರೈತನಿಗೆ ವರ್ಷಕ್ಕೆ ರೂ. 4,೦೦೦ ನೆರವು ಪುನಃ ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸಲಾಯಿತು. ಬಿ. ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಜಾರಿಯಲ್ಲಿದ್ದ ರೂ. 25,೦೦೦ ಶುಲ್ಕದಲ್ಲಿ ಟ್ರಾನ್ಸ್ಫಾರ್ಮರ್ ಹಾಗೂ ಶಾಶ್ವತ ವಿದ್ಯುತ್ ಸಂಪರ್ಕ ಒದಗಿಸುವ ಯೋಜನೆಯನ್ನು ತಕ್ಷಣ ಪುನಃ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಗರಿಷ್ಠ ರೂ. ೧೦ ಲಕ್ಷವರೆಗೆ ಸಾಲ ಸೌಲಭ್ಯ ನೀಡಬೇಕು. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಸಬ್ಸಿಡಿ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು. ಈ ಕುರಿತು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸೋಮನಾಥ್ ಪಾಟೀಲ್, ಶಾಸಕರಾದ ಡಾ|| ಶೈಲೇಂದ್ರ ಬೆಲ್ದಾಳೆ, ಮಾಜಿ ಕೇಂದ್ರ ಸಚಿವರಾದ ಶ್ರೀ ಭಗವಂತ್ ಖೂಬಾ, ಈಶ್ವರ್ ಸಿಂಗ್ ಠಾಕೂರ್, ದಕ್ಸಿಣ ಮಂಡಲ್ ಅಧ್ಯಕ್ಷರಾದ ಗುರುನಾಥ್ ರಾಜಗಿರ, ಗ್ರಾಮಾಂತರ ಅಧ್ಯಕ್ಷರಾದ ದೀಪಕ ಗಾದಗೆ, ನಗರ ಅಧ್ಯಕ್ಷರಾದ ಶಶಿಧರ ಹೊಸಳ್ಳಿ, ಮುಖಂಡರಾದ ವೀರಶಟ್ಟಿ ನಿಡವಂಚಾ, ಗುರುನಾಥ್ ಜಾಂತಿಕರ್, ರಾಜಶೇಖರ್ ನಾಗಮೂರ್ತಿ, ಅಶೋಕ ಹೊಕ್ರಣೆ, ಬಾಬುರಾವ್ ಕಾರ್ ಬಾರಿ, ಬಸವರಾಜ್ ಪವಾರ್, ಮಹಿಳಾ ರಾಜ್ಯ ಕಾರ್ಯದರ್ಶಿಗಳಾದ ಹೇಮಾ ತುಕಾ ರೆಡ್ಡಿ, ವೀರು ದಿಗ್ವಾಲ್, ಸುನಿಲ್ ಗೌಳಿ, ಗಣೇಶ ಬೋಸ್ಲೆ, ಚಂದ್ರಯ್ಯ ಸ್ವಾಮಿ, ನರೇಶ್ ಗೌಳಿ, ರೋಷನ್ ವರ್ಮಾ, ವೀರೇಶ್ ಸ್ವಾಮಿ, ಸುಭಾಷ್ ಮಡಿವಾಳ ಮಹಾನದಾ ಪಾಟೀಲ್, ಗುಂಡಮ್ಮ, ಮಾಯಾವತಿ ಕೋಟೆ, ಜಗನ್ನಾಥ್ ಪಾಟೀಲ್ ಸಿರಿಕಟ್ನಳ್ಳಿ, ರೈತ ಮೋರ್ಚಾ ಅಧ್ಯಕ್ಷರು ಹಾಗೂ ರೈತರು ಉಪಸ್ಥಿತರಿದ್ದರು.

ವರದಿ: ಶಿವು ರಾಥೋಡ

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ