3-day hunger strike for government school survival

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಮಂಡ್ಯ : ದೇಶಕ್ಕೆ ಸ್ವತಂತ್ರ ಬಂದು ಸುಮಾರು 78 ವರ್ಷವಾದರೂ, ಸಂವಿಧಾನದಲ್ಲಿ ಆರ್ಟಿಕಲ್ 21ಎ ಅಡಿಯಲ್ಲಿ ನೀಡಲಾಗಿರುವ ಗುಣಮಟ್ಟದ ಉಚಿತ ಶಿಕ್ಷಣ ಮೂಲಭೂತ ಹಕ್ಕುಗಳನ್ನು ಸರ್ಕಾರ ಜನಸಾಮಾನ್ಯರಿಗೆ ಲಭ್ಯ ಇಲ್ಲ. ಇವತ್ತಿನ ದಿನ ಬಹುತೇಕ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಜಕಾರಣಿಗಳ ಕುಟುಂಬದವರ ಹಿಡಿತದಲ್ಲಿದೆ. ಇದರ ಜೊತೆಗೆ “ಮ್ಯಾಗ್ನೆಟ್ ಶಾಲೆಗಳು ಹಾಗೂ ಕೆಪಿಎಸ್ ಶಾಲೆಗಳು ಎಂಬ ಹೆಸರಿನಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ಶಾಶ್ವತವಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ದಲ್ಲಾಳಿಯಾಗಿ ಸರ್ಕಾರ ಸಮಾಜ ವಿರೋಧಿ, ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಜನಸಾಮಾನ್ಯರು ಬೀದಿಗಿಳಿಯುವ ಸಮಯ ಬಂದಿದೆ.

ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸರ್ಕಾರಿ ಶಾಲೆಗಳು ಉಳಿಯಬೇಕು. ಸರ್ಕಾರಿ ಶಾಲೆಗಳೇ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ಆದ್ದರಿಂದ ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿಯನ್ನು ಜಾರಿಗೆ ತಂದು, ಇವತ್ತಿನ ದಿನ ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಸಿಗುತ್ತಿರುವ ಗುಣಮಟ್ಟದ ಶಿಕ್ಷಣ ಬಡವರ ಮಕ್ಕಳಿಗೂ ಸಿಗಬೇಕು ಎಂಬ ಬೇಡಿಕೆಯೊಂದಿಗೆ ಮಂಡ್ಯ ಜಿಲ್ಲಾ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಂಘ ಮೂರು ದಿನಗಳ ಉಪವಾಸ ಸತ್ಯಾಗ್ರಹ ಕೈಗೊಂಡಿದೆ.

ಪ್ರಮುಖ ಬೇಡಿಕೆಗಳು :

  1. ರಾಜ್ಯದ 41,905 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲೂ ಎಲ್ಕೆಜಿಯಿಂದ 5ನೇ ತರಗತಿವರೆಗೆ ದ್ವಿಭಾಷೆಯಲ್ಲಿ ಸಿಬಿಎಸ್ಸಿ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸಬೇಕು.
  2. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯ್ತಿಯಲ್ಲೂ 6ನೇ ತರಗತಿಯಿಂದ 12ನೇ ತರಗತಿಯವರೆಗೆ ನವೋದಯ ಮಾದರಿ ಸಿಬಿಎಸ್ಸಿ ವಸತಿ ಶಾಲಾ ಶಿಕ್ಷಣ ನೀಡಬೇಕು.
  3. ಕೊನೆಯದಾಗಿ ಸರ್ಕಾರಕ್ಕೆ ಯೋಗ್ಯತೆ ಇಲ್ಲವಾದರೆ ಶಿಕ್ಷಣ ಇಲಾಖೆಯ ಅನುದಾನವನ್ನು ನೇರವಾಗಿ ಪ್ರತಿಯೊಂದು ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಖಾತೆಗೆ ವರ್ಗಹಿಸಿದರೆ, ಹಾಲಿನ ಡೈರಿ ರೀತಿ, ಎಸ್‌ಡಿಎಂಸಿಯವರೇ ಶಿಕ್ಷಕರ ನೇಮಕ ಮಾಡಿ, ಮೂಲಭೂತ ಸೌಕರ್ಯ ಒದಗಿಸಿ ಶಾಲೆಗಳನ್ನು ಮುನ್ನಡೆಸಿ, ಸರ್ಕಾರೀ ಶಾಲೆಗಳಿಗೆ ಬೀಗ ಹಾಕುವ ಕೆಲಸಕ್ಕೆ ಶಾಶ್ವತವಾಗಿ ತೆರೆ ಎಳೆಯಲಿದ್ದಾರೆ.

ಈ ಸಂಧರ್ಭದಲ್ಲಿ ಅಶ್ವತ. ಟಿ.ಮರಿಗೌಡ ನೆರವು ಕಟ್ಟಡ ಮತ್ತು ಅಸಂಘಟಿತ ಸಂಘ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರು, ಸಂತೋಷ್ ಮಂಡ್ಯ ಗೌಡ, ಇಂಡುವಾಳ ಚಂದ್ರಶೇಖರ್, ಶಿವಳ್ಳಿ ಚಂದ್ರಶೇಖರ್, ಅನೀಲ್ ಕುಮಾರ್.ವಿ.ಎಮ್. ರೇವಣ ಮೈಸೂರ್, ಮಂಡ್ಯ ಜಿಲ್ಲಾ ರೈತರ ಸಂಘ, ಹಾಗೂ ಕರ್ನಾಟಕ ರಾಜ್ಯ ಎಸ್.ಡಿ.ಎಮ್.ಸಿ.ಸಂಘ ಪದಾಧಿಕಾರಿಗಳು ಮತ್ತು ನೆರವು ಮಂಡ್ಯ ಅಧ್ಯಕ್ಷರ ನವೀನ ಕುಮಾರ, ನೆರವು ಮಳವಳ್ಳಿ ತಾಲೂಕು ಅಧ್ಯಕ್ಷರು ವಿನೋದ ಕುಮಾರ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಬೋರೇಗೌಡ. ಟಿ ಎಂ ಮತ್ತು ಕರ್ನಾಟಕ ತುಂಬೆಲ್ಲಾ ಇರುವ ನೆರವು ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದರು.

ವರದಿ : ಶಿವು ರಾಠೋಡ

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ