ವಿಜಯಪುರ : ನೂತನವಾಗಿ ವಿಜಯಪುರ ಜಿಲ್ಲೆಗೆ 152 ಹೊಸ ಬಸ್‌ಗಳ ನಗರಸಾರಿಗೆ ಬಸ್ಸುಗಳ ಲೋಕಾರ್ಪಣೆ ಸಮಾರಂಭಕ್ಕೆ ಆಗಮಿಸಿದ ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರನ್ನು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ(ಕೊಣ್ಣೂರು) ಸನ್ಮಾನಿಸಿದರು.
ವಿಜಯಪುರ ನಗರದ ವಿ.ಬ.ದರ್ಬಾರ ಹೈಸ್ಕೂಲ್ ಆವರಣದಲ್ಲಿ ಸಚಿವರನ್ನು ಭೇಟಿ ಮಾಡಿದ ಅಸ್ಕಿ ಫೌಂಡೇಶನ್ ಅಧ್ಯಕ್ಷ ಅಸ್ಕಿ ಅವರು ಸಚಿವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ,ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ,ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಇದ್ದರು.







