ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಲಬುರಗಿ ಜಿಲ್ಲೆಯ ನಂದಿಕೂರಲ್ಲಿ ಈ ದುರ್ಘಟನೆ ನಡೆದಿದೆ. ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜ್ಯೋತಿ ಪಾಟೀಲ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ್ ಮನೆ ಮುಂದೆಯೇ ಸೂಸೈಡ್ ಮಾಡಿಕೊಂಡಿದ್ದಾರೆ.
ಮಲ್ಲಿನಾಥ್ ಮನೆಗೆ ಹೋಗಿ ಜ್ಯೋತಿ ಬಾಗಿಲು ತಟ್ಟಿದ್ದಾರೆ. ಮಲ್ಲಿನಾಥ್ ಅವರ ಪತ್ನಿ ಬಾಗಿಲು ತೆರೆದಿದ್ದಾರೆ. ಕೂಡಲೇ ಜ್ಯೋತಿ ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







