Muda case DCM DK Shivakumar press meet in Bengaluru

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು.

“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃ ತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ” ಎಂದರು.

ಮಂಗಳವಾರ ದೆಹಲಿಗೆ ಪ್ರಯಾಣ:

ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಕೇಳಿದಾಗ, “ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ ಎಂದರು.

ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ” ಎಂದು ತಿಳಿಸಿದರು.

ನಾಗಸಾಧುಗಳು ಆಶೀರ್ವಾದ ಮಾಡಿರುವ ಬಗ್ಗೆ ಕೇಳಿದಾಗ, “ಅವರು ಮನೆಗೆ ಹುಡುಕಿಕೊಂಡು ಬಂದು ಆಶೀರ್ವಾದ ಮಾಡಿದ್ದಾರೆ. ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ. ರಾಜಕೀಯದಲ್ಲಿರುವ ಕಾರಣ ನಮಗೆ ಸಾಧು ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ರೀತಿಯ ಜನರೂ ನಮಗೆ ಬೇಕು.
ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದೆ. ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿದೆ” ಎಂದು ತಿಳಿಸಿದರು.

Latest News

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ವಿಜಯಪುರ : ನೂತನವಾಗಿ ವಿಜಯಪುರ ಜಿಲ್ಲೆಗೆ 152 ಹೊಸ ಬಸ್‌ಗಳ ನಗರಸಾರಿಗೆ ಬಸ್ಸುಗಳ ಲೋಕಾರ್ಪಣೆ

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಮೇಲೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಮಾಡಿದ್ದ ಬಗ್ಗೆ ಚರ್ಚಿಸಲು ಅವಕಾಶ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ:                           ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ.ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೇಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ