ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು.
ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, “ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು.
ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಪ್ರಮುಖ ಬೀದಿಗಳಲ್ಲಿ ಧ್ವನಿವರ್ಧಕದ ಹಾಗೂ ಫಲಕಗಳನ್ನು ಹಿಡಿದು ಘೋಷಣೆ ಕೂಗುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.ಮುಖ್ಯಗುರುಮಾತೆ ಸವಿತಾ ಜಾನಾ, ಸಹ ಶಿಕ್ಷಕ ಸಂತೋಷ ನಾಯಕ,ಆಶಾ ಕಾರ್ಯಕರ್ತೆ ಭಾರತಿ ಮುರಾಳ, ನೀಲಮ್ಮ ಹಾಜರಿದ್ದರು.







