ಬೆಂಗಳೂರು: ರಾತ್ರೋರಾತ್ರಿ ರಸ್ತೆಗಿಳಿದು ಹಾಸ್ಟೆಲ್ ವಿದ್ಯಾರ್ಥಿನಿಯರು (Students) ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆ (protest) ನಡೆಸಲಾಗಿದೆ.
ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ಹಾಸ್ಟೆಲ್ ನಲ್ಲಿ ಮೂಲಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಕೆಲವು ಕಿಡಿಗೇಡಿಗಳು ಹಾಸ್ಟೆಲ್ ವಿದ್ಯಾರ್ಥಿನಿಯರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ವಾರ್ಡನ್ ವಿದ್ಯಾರ್ಥಿನಿಯರ ನಡುವೆ ಅಕ್ರಮ ಸಂಬಂಧ ಎಂದು ವದಂತಿ ಹರಡುತ್ತಿದ್ದಾರೆ. ಹಾಸ್ಟೆಲ್ ಸೂಪರ್ ವೈಸರ್ ಈ ರೀತಿ ವದಂತಿ ಹಬ್ಬಿಸುತ್ತಿದ್ದಾರೆ. ದುರುದ್ದೇಶದಿಂದ ತಮ್ಮ ಬಗ್ಗೆ ಮಾನಹಾನಿ ಮಾಡುತ್ತಿರುವುದಾಗಿ ಆರೋಪಿಸಲಾಗಿದೆ.
ಈಶಾನ್ಯ ರಾಜ್ಯದ ವಿದ್ಯಾರ್ಥಿನಿಯರು ಹಾಸ್ಟೆಲ್ ಬಳಿ ರಸ್ತೆ ಪಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಿ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ. ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಧರಣಿ (protest) ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







