ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿಸುವಂತೆ ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಪುರಸಭೆ ಮುಂಭಾಗದಲ್ಲಿ ಭಾನುವಾರ ರಾಷ್ಟಿçÃಯ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮದಲ್ಲಿ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಮತಕ್ಷೇತ್ರದಲ್ಲಿ ಒಟ್ಟು 39370 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದ್ದು ಇದಕ್ಕಾಗಿ 207 ಬೂತ್‌ಗಳನ್ನು ಸ್ಥಾಪಿಸಲಾಗಿದೆ.ಅಭಿಯಾನ ಯಶಸ್ವಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಡಾ.ಸತೀಶ ತಿವಾರಿ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನದ ಕುರಿತು ಮಾಹಿತಿ ನೀಡಿದರು.ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ, ಐ.ಸಿ.ಮಾನಕರ, ಶಿವಣ್ಣ ಮಾಗಿ, ಇಸ್ಮಾಯಿಲ ವಾಲೀಕಾರ, ಶ್ರೀಕಾಂತ ಸಜ್ಜನ, ಡಿ.ಎನ್.ಮಕಾನದಾರ, ಯಲ್ಲಪ್ಪ ಚಲವಾದಿ,ಮಹ್ಮದರಫೀಕ ಬಾಗವಾನ,ಪುರಸಭೆ ಆರೋಗ್ಯ ಅಧಿಕಾರಿ ಜಾವೇದ ನಾಯ್ಕೋಡಿ, ಮಹಾಂತೇಶ ಕಟ್ಟಿಮನಿ ಮೊದಲಾದವರು ಇದ್ದರು.







