ವಿಜಯಪುರ : ರಾಜ್ಯದ ಉತ್ತರ ಒಳನಾಡಿನ ವಿಜಯಪುರ ಜಿಲ್ಲೆಯಲ್ಲಿ ತೀವ್ರ ಶೀತಗಾಳಿ ಬೀಸುವ ಪ್ರಯಕ್ತ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಯ ಸಮಯದಲ್ಲಿ ಬದಲಾವಣೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ವಿಜಯಪುರದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಹಾಗೂ ಐಎಂಡಿ ಬೆಂಗಳೂರು ಅವರು ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿರುವ ಪರಿಣಾಮ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದು ಅದರಂತೆ ಜಿಲ್ಲಾ ವಿಪತ್ತು ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ಮುಂದಿನ ಹತ್ತು ದಿನಗಳಿಗೆ ಶೀತಗಾಳಿಯು ಬೀಸಲಿರುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿನ ಎಲ್ಲ ಸರಕಾರಿ ಶಾಲೆಗಳಂತೆ ಖಾಸಗಿ ಹಾಗೂ ಅನುದಾನ,ಅನುದಾನ ರಹಿತ ಶಾಲೆಗಳು ಕೂಡಾ ಬೆಳಗ್ಗೆ 10 ಗಂಟೆಗೆ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.







