ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

Ad
Ad

Ad
Ad

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಶುಕ್ರವಾರ ಕಾರ್ಗಿಲ್ ಯುದ್ಧದ 25 ವರ್ಷಗಳ ನೆನಪಿನಲ್ಲಿ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಶಾಲಾ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಾ ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ ದೇಶದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಒಂದಾಗಿದೆ ಕಾರ್ಗಿಲ್‌ ಯುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ ಮಾತನಾಡಿ ದೇಶ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ನಮ್ಮ ದೇಶದ ಸೈನಿಕರು ನಮ್ಮ ಹೆಮ್ಮೆಯಾಗಿದ್ದಾರೆ. ಅವರು ಇಲ್ಲದೇ ಹೋದರೆ ನಮ್ಮ ರಕ್ಷಣೆ ಅಸಾಧ್ಯವಾಗುತ್ತದೆ ದೇಶ ಭಕ್ತಿ ಎಂಬುದು ನಮ್ಮಲ್ಲಿ ತಾನಾಗಿಯೇ ಬರಬೇಕು ನಿಮ್ಮಲ್ಲಿ ಇರುವವರು ಕೂಡ ನಾನು ದೇಶದ ಸೈನಿಕನಾಗಿ ಕಾರ್ಯನಿರ್ವಹಿಸುತ್ತೇನೆ ಎಂಬ ಛಲ ನಿಮ್ಮಲ್ಲಿ ಬರಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೈನಿಕರಾದ ಶೆಟ್ಟಿಗಾನಹಳ್ಳಿ ಮುನಿಯಪ್ಪ, ದೊಡ್ಡ ಅಯ್ಯೂರು ಕೃಷ್ಣೇಗೌಡ ಅವರನ್ನು ಸನ್ಮಾನಿಸಲಾಯಿತು, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು, ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ನಾರಾಯಣಪ್ಪ, ಗೌಡರ ವೆಂಕಟಪ್ಪ, ಗೋವಿಂದಪ್ಪ, ಕನ್ವೀನರ್ ರಾಜಣ್ಣ, ಪೂಜಾರಿ ರಘು, ಭಗತ್ ಸಿಂಗ್ ಸೇವಾ ಸಮಿತಿ ಅಧ್ಯಕ್ಷ ಮೋಹನ್ ಉಪಾಧ್ಯಕ್ಷ ಮಾರ್ಕೊಂಡಯ್ಯ, ಸಮಿತಿ ಸದಸ್ಯರಾದ ರವಿಕುಮಾರ್, ನವೀನ್, ನೃತ್ಯ ನಿರ್ದೇಶಕ ಶ್ರವಣ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿಧ್ಯಾರ್ಥಿಗಳು ಮತ್ತು ಗ್ರಾಮಸ್ಥರು ಇದ್ದರು ಕಾರ್ಯಕ್ರಮವನ್ನು ದೊಮ್ಮಸಂದ್ರ ನರಸಿಂಹ ನಿರೂಪಣೆ ಮಾಡಿದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500