ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್‌ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ ಬದಲಾವಣೆ ಆಗುತ್ತಿರುವುದನ್ನು ನೋಡಿ ತುಂಬಾ ಸಂತೋಷವಾಗಿದ್ದು ಇಂದಿನಿAದ ಆರಂಭವಾಗಿರುವ ನಿಮ್ಮ ನವಜೀವನ ಉತ್ತಮವಾಗಿರಲೆಂದು ಹಾರೈಸಿದರು.

ಕಲಬುರಗಿ ಪ್ರಾದೇಶಿಕ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿ, ವೀರೇಂದ್ರ ಹೆಗ್ಗಡೆ ಹಮ್ಮಿಕೊಂಡು ಬಂದಿರುವAತಹ ವ್ಯಸನ ಮುಕ್ತ ಸಮಾಜ ನಿರ್ಮಾಣದ ಈ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನಲ್ಲಿ ಆರಂಭಗೊAಡು ಇಡೀ ರಾಜ್ಯ ವ್ಯಾಪ್ತಿ ಅನುಷ್ಠಾನಗೊಂಡು ಇಂತಹ ಶಿಬಿರ ಸೇರಿ ಸುಮಾರು ರೂ. 1,40,000 ಜನ ಮದ್ಯ ವ್ಯಸನಿಗಳು ಸಾರಾಯಿ ಮುಕ್ತ ಜೀವನ ನಡೆಸುತ್ತಿದ್ದಾರೆ ಎಂದರು.

ಹೊಸ ಜೀವನ ಪ್ರಾರಂಭ ಮಾಡಿ ನೀವು ಹಿಂದೆ ಸಮಾಜದಲ್ಲಿ ಸರಿಯಾದ ಗೌರವ ಸಿಗುತ್ತಿರಲಿಲ್ಲ. ಇವತ್ತು ನೀವು ಬದಲಾವಣೆ ಆಗಿ ಒಳ್ಳೆ ಜೀವನ ಕಟ್ಟಿಕೊಂಡರೆ ಮತ್ತೆ ನಿಮ್ಮನ್ನು ಸಮಾಜ ಒಬ್ಬ ಗಣ್ಯ ವ್ಯಕ್ತಿ ತರಾ ನೋಡತಾರೆ ಗೌರವ ಕೊಡುತ್ತಾರೆ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಮಾತನಾಡಿ, ಎಂಟು ದಿನ ಶಿಬಿರಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆತಿದ್ದು ಅದರ ಸದುಪಯೋಗಪಡೆದುಕೊಳ್ಳುವ ಬಗ್ಗೆ ತಿಳಿಸಿ ಎಂಟು ದಿನದ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲ ದಾನಿಗಳನ್ನು ಗಣ್ಯರನ್ನು ಒಕ್ಕೂಟದವರನ್ನು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರನ್ನು ಕಾರ್ಯಕ್ರಮ ನಡೆಸಲು ಅನುವು ಮಾಡಿಕೊಟ್ಟ ಶಾದಿ ಮಹಲ್ ಕಮಿಟಿಯವರನ್ನು ಸಹಕಾರ ನೀಡಿದ ಎಲ್ಲರನ್ನು ಗೌರವದಿಂದ ಸ್ಮರಿಸಿ ಅಭಿನಂದನೆ ಸಲ್ಲಿಸಿದರು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗ್ರತಿ ವೇದಿಕೆ ಅಧ್ಯಕ್ಷ ಸೋಮನಗೌಡ (ಅಪ್ಪುಗೌಡ)ಪಾಟೀಲ್ ,ಚನ್ನಬಸಪ್ಪಗೌಡ ಪಾಟೀಲ್, ಬಸರಕೋಡ ಬಸವೇಶ್ವರ ದೇವಸ್ಥಾನ ಸಮೀತಿ ಅಧ್ಯಕ್ಷ ಕೆ.ವಾಯ್.ಬಿರಾದಾರ,ಪತ್ರಕರ್ತರಾದ ಶಂಕರ ಈ.ಹೆಬ್ಬಾಳ,ಹಣಮಂತ ನಲವಡೆ,ಗಣ್ಯರಾದ ಶ್ರೀಶೈಲ ಮೇಟಿ, ಶಂಕ್ರಪ್ಪ ಸಜ್ಜನ, ಗುಂಡಪ್ಪ ಕೊಟಗಿ,ಮಾಂತೇಶ ದಿಂಡವಾರ,
ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯರಾದ ಶ್ರೀಶೈಲ ದೊಡ್ಡಮನಿ,ವಿರೇಶ್ ಪಾಟೀಲ್, ಕಲ್ಬುರ್ಗಿ ಜನಜಾಗೃತಿ ಯೋಜನಾಧಿಕಾರಿ ರಾಜೇಶ, ಮುದ್ದೇಬಿಹಾಳ ತಾಲೂಕಿನ ಯೋಜನಾಧಿಕಾರಿ ಶಿವಾನಂದ ಪಿ, ಶಿಬಿರಾಧಿಕಾರಿ ದಿನೇಶ್ ಮರಾಠೆ,
ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಸ್ವಸಹಾಯ ಸಂಘದ ಸದಸ್ಯರು ವಲಯದ ಮೇಲ್ವಿಚಾರಕ ನಾಗೇಶ್ ಎಸ್ ಕೆ ,ನಿಂಗನಗೌಡ ಪಾಟೀಲ್, ತಾಲೂಕಿನ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿ,ಸೇವಾ ಪ್ರತಿನಿಧಿ ಇದ್ದರು.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.