ಬನದೇವಿ ನಿನ್ನ ಪಾದಕ ಶಂಭುಕೋ : ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಬನದೇವಿ ನಿನ್ನ ಪಾದಕ ಶಂಭುಕೋ : ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ದೇವಿ ರಥೋತ್ಸವ ಶನಿವಾರ ಸಾವಿರಾರು ಭಕ್ತಸಮೂಹದ ಜಯಘೋಷಗಳ ಮಧ್ಯೆ ವೈಭವದಿಂದ ಜರುಗಿತು.

ಶನಿವಾರ ಬೆಳಗ್ಗೆ ದೇವಿಗೆ ಮಹಾರುದ್ರಾಭಿಷೇಕ, ಬೆಳಗಿನ ಜಾವ ಚಂಡಿ ಹವನ ನಡೆಸಲಾಯಿತು.ದೇವಿಯ ರಥದ ಕಳಸವು ಶಂಕರಪ್ಪ ಗುಡ್ಡದ ಅವರ ಮನೆಯಿಂದ ಹೊರಟು ಕಾಳಿಕಾದೇವಿ ಗಂಗಸ್ಥಳಕ್ಕೆ ತೆರಳಿ ಮರಳಿ ತು.ಸಂಜೆ ಶಿರೋಳ ಗ್ರಾಮದಿಂದ ರಥೋತ್ಸವದ ಹಗ್ಗದ ಮಿಣಿ(ಹಗ್ಗ)ದ ಮೆರವಣಿಗೆ ಆಗಮಿಸಿತು.

ಸಂಜೆ 6.25ಕ್ಕೆ ದೇವಿಯ ಮಹಾರಥೋತ್ಸವ ಸಸಾವಿರಾರು ಭಕ್ತರ ಜಯಘೋಷಗಳ ಮಧ್ಯೆ ಜರುಗಿತು.ಬನಶಂಕರಿ ದೇವಿ ನಿನ್ನ ಪಾದಕ ಶಂಭುಕೋ, ಬನದೇವಿ ನಿನ್ನ ಪಾದಕ ಶಂಭುಕೋ ಎಂದು ಭಕ್ತರು ಘೋಷಣೆಗಳನ್ನು ಹಾಕಿದರು.ರಥಕ್ಕೆ ಉತ್ತತ್ತಿ,ಬಾಳೆಹಣ್ಣು,ನಿಂಬೆಹಣ್ಣು,ಲಾಡು ಎಸೆದು ಭಕ್ತಿ ಸಮರ್ಪಿಸಿದರು. ಪುರವಂತರು,ಸುಮoಗಲಿಯರು ಕಳಸದ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.ಪಿಎಸ್‌ಐ ಸಂಜಯ ತಿಪರೆಡ್ಡಿ ಅವರ ನೇತೃತ್ವದಲ್ಲಿ ಎಎಸ್‌ಐ ಕೆ.ಎಸ್.ಅಸ್ಕಿ, ಚಿದಂಬರ ಕುಲಕರ್ಣಿ,CRIME ಪಿಎಸ್‌ಐ ಆರ್.ಎಸ್.ಭಂಗಿ ಸಿಬ್ಬಂದಿ ಬಿಗಿ ಬಂದೋಬಸ್ತ್ ವಹಿಸಿದ್ದರು.ಜಾತ್ರೆಯ ನಿಮಿತ್ಯ ವಿವಿಧ ದಾನಿಗಳಿಗೆ ಸನ್ಮಾನ ಮಾಡಲಾಯಿತು.ಐದು ದಿನವೂ ಅನ್ನಸಂತರ್ಪಣೆ ದಾನಿಗಳ ನೆರವಿನಿಂದ ಕೈಗೊಳ್ಳಲಾಗಿತ್ತು.

ಅಗ್ನಿ ಮಹೋತ್ಸವ : ಬನಶಂಕರಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಪುರವಂತರಾದ ಕಾಂತು ಹೆಬ್ಬಾಳ ಅಗ್ಗಿ ಉತ್ಸವದ ಪೂಜೆ ನಡೆಸಿದರು.ರಾತ್ರಿ ಸಾವಿರಾರು ಜನರು ಅಗ್ಗಿ ಹಾಯ್ದು ತಮ್ಮ ಭಕ್ತಿ ಸಮರ್ಪಿಸಿದರು.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.