ಟಿಎಪಿಸಿಎಂಎಸ್‌ನಲ್ಲಿ ಖರೀದಿ ಕೇಂದ್ರ: ರೈತರ ಶೋಷಣೆ ತಪ್ಪಿಸಲು ಬೆಂಬಲ ಬೆಲೆ ನಿಗದಿ-ನಾಡಗೌಡ

ಟಿಎಪಿಸಿಎಂಎಸ್‌ನಲ್ಲಿ ಖರೀದಿ ಕೇಂದ್ರ: ರೈತರ ಶೋಷಣೆ ತಪ್ಪಿಸಲು ಬೆಂಬಲ ಬೆಲೆ ನಿಗದಿ-ನಾಡಗೌಡ

ಮುದ್ದೇಬಿಹಾಳ : ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಖಾಸಗಿ ಮಾರುಕಟ್ಟೆಯಲ್ಲಿ ನಡೆಯುವ ಶೋಷಣೆ ತಪ್ಪಿಸಲು ಬೆಂಬಲ ಬೆಲೆ ನಿಗದಿಗೊಳಿಸಿ ಖರೀದಿ ಕೇಂದ್ರಗಳನ್ನು ತೆರೆದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.

ಪಟ್ಟಣದ ಏಪಿಎಂಸಿಯಲ್ಲಿರುವ ಟಿಎಪಿಸಿಎಂಎಸ್ ಆವರಣದಲ್ಲಿ ಸೋಮವಾರ ತೊಗರಿ ಖರೀದಿ ಕೇಂದ್ರಕ್ಕೆ ಶಾಸಕ ಸಿ.ಎಸ್.ನಾಡಗೌಡ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಗಳ ಉದ್ದೇಶ ಮಾರುಕಟ್ಟೆಯಲ್ಲಿ ನಿಗದಿತ ಬೆಂಬಲ ಬೆಲೆಗಿಂತ ಕೆಳಗೆ ಬೆಲೆ ಇಳಿಯಬಾರದು.ರೈತರು ಖರೀದಿ ಕೇಂದ್ರಗಳಿಗೆ ಬಂದು ತೊಗರಿ ಕೊಡಬೇಕು ಎಂಬ ನಿಯಮ ಕಡ್ಡಾಯ ಏನಿಲ್ಲ. ಆದರೆ ಬೆಲೆ ಇಲ್ಲಿಗಿಂತ ಹೆಚ್ಚಿನ ಬೆಲೆ ಮಾರುಕಟ್ಟೆಯಲ್ಲಿ ಸಿಕ್ಕರೆ ಅಲ್ಲಿಯೂ ಮಾರಾಟ ಮಾಡಬಹುದಾಗಿದೆ ಎಂದರು.

ಮುದ್ದೇಬಿಹಾಳ ತಾಲ್ಲೂಕಿನಲ್ಲಿ 42 ಸಾವಿರ ಹೆಕ್ಟೇರ್,ತಾಳಿಕೋಟಿ ತಾಲ್ಲೂಕಿನಲ್ಲಿ 63 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದೆ.ರಾಜ್ಯ ಹಾಗೂ ಕೇಂದ್ರಗಳ ಸಹಯೋಗದಲ್ಲಿ ರೈತರಿಗೆ ಪ್ರೋತ್ಸಾಹಧನ ಒದಗಿಸಲು ತೀರ್ಮಾನಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ತೆರೆದಿದ್ದು ರೈತರು ಆತಂಕ ಪಡಬೇಕಾಗಿಲ್ಲ. ಪ್ರತಿ ಎಕರೆಗೆ ನಾಲ್ಕು ಕ್ವಿಂಟಾಲ್‌ನAತೆ ತೊಗರಿ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ.ಮಧ್ಯವರ್ತಿಗಳು ರೈತರಿಗೆ ಕಡಿಮೆ ದರದಲ್ಲಿ ತೊಗರಿ ತೆಗೆದುಕೊಳ್ಳಲು ಮುಂದಾದರೆ ಅದಕ್ಕೆ ರೈತರು ಕಿವಿಗೊಡಬೇಡಿ.ಬೆಂಬಲ ಬೆಲೆಯಡಿ ತೊಗರಿ ನೀಡಿದರೆ ಹೆಚ್ಚಿನ ಬೆಲೆ ರೈತರಿಗೆ ದೊರೆಯಲಿದೆ ಎಂದರು.

ಸಹಕಾರ ಅಭಿವೃದ್ಧಿ ಅಧಿಕಾರಿ, ಟಿಎಪಿಸಿಎಂಎಸ್ ಕಾರ್ಯದರ್ಶಿ ವಿಜಯಕುಮಾರ ಉತ್ನಾಳ,ಟಿಎಪಿಸಿಎಂಎಸ್ ಅಧ್ಯಕ್ಷ ಮನೋಹರ ಎಸ್.ಮೇಟಿ,ಉಪಾಧ್ಯಕ್ಷ ಚಿದಾನಂದ ಸೀತಿಮನಿ, ನಿರ್ದೇಶಕರಾದ ಬಿ.ಎಂ.ಇಸ್ಲಾoಪೂರ,ಎo.ಕೆ.ಮುತ್ತಣ್ಣವರ,ಸುರೇಶ ಹಳೇಮನಿ,ಮಲ್ಲನಗೌಡ ಬಿರಾದಾರ, ಕೊಡಗಾನೂರ,ಗುರಣ್ಣ ಹತ್ತೂರ,ಶಿವನಗೌಡ ಪಾಟೀಲ,ಅಶೋಕ ಇಲಕಲ್ಲ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಗುರುಲಿಂಗಪ್ಪ ಹಿಪ್ಪರಗಿ,ಸಹ ಕಾರ್ಯದರ್ಶಿ ಗುರುರಾಜ ಕೋನರೆಡ್ಡಿ,ಸಿಬ್ಬಂದಿ ಮಹಾಂತಗೌಡ ಪಾಟೀಲ ,ಸವಿತಾ ಚೌಧರಿ, ಶರಣಗೌಡ ಬಿರಾದಾರ ಇದ್ದರು.

Latest News

9.49 ಲಕ್ಷ ರೂ.ಲಾಭ :                                                           ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ಈ ಆರ್ಥಿಕ ವರ್ಷದಲ್ಲಿ ಒಟ್ಟು 4.47 ಕೋಟಿ ರೂ.ಸಾಲ ರೈತರಿಗೆ ಹಂಚಿಕೆ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ : ಪ್ರಸಕ್ತ ವರ್ಷ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಭೀಕರ ಬರಗಾಲವಿದ್ದು ರೈತರು ಸಂಕಷ್ಟದಲ್ಲಿದ್ದು ಶಾಸಕ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ:                       ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ: ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಮುದ್ದೇಬಿಹಾಳ : ನಮ್ಮ ಸಂಘದ ಹಿಂದಿನ ಕಾರ್ಯದರ್ಶಿ ಮಾಡಿದ ಅವ್ಯವಹಾರದಿಂದ ಸಂಘಕ್ಕೆ ಲಾಭಾಂಶ ಕಡಿಮೆಯಾಗಿದೆ.ಅವರ

16.17 ಲಕ್ಷ ರೂ.ಲಾಭ :                                                     ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

16.17 ಲಕ್ಷ ರೂ.ಲಾಭ : ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿoದ ಸನ್ 2025-26 ನೇ ಸಾಲಿನಲ್ಲಿ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ ತಾಲ್ಲೂಕು ಇನ್ನೂವರೆಗೂ ಘೋಷಣೆಯಾಗಿಲ್ಲ.ಎರಡು ದಿನಗಳ ಕಾಲ ಮಣ್ಣಿನ ತೇವಾಂಶ,ಬೆಳೆಯ ಗುಣಮಟ್ಟ,ವಾತಾವರಣದಲ್ಲಿ ತೇವಾಂಶ ಎಷ್ಟಿದೆ ಎಂದು ಸರ್ವೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕು.ಈಗ ಸಾಧಾರಣ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದ್ದಾರೆ ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದು ದಿನವೂ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ ಅಭಿಮಾನಿಗಳು ಗುರುವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿ ಬಿಡುಗಡೆಯಾಗುತ್ತಲೇ ಅದರಲ್ಲಿ ಮುದ್ದೇಬಿಹಾಳ ತಾಲ್ಲೂಕು ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಸರ್ಕಾರಕ್ಕೆ,ಸಿಎಂ,ಕoದಾಯ ಮಂತ್ರಿ ಹಾಗೂ ಶಾಸಕ ಸಿ.ಎಸ್.ನಾಡಗೌಡರಿಗೆ ಜಯಘೋಷಗಳನ್ನು ಹಾಕಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ