ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿAದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಾಗಾರ, ಉತ್ತಮ ಶಿಕ್ಷಕ,ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಜ.24 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಕೃಷ್ಣಾ ಮಂಗಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ದಿವ್ಯ ಸಾನಿಧ್ಯವನ್ನು ಕುಂಟೋಜಿ ಭಾವೈಕ್ಯತಾ ಮಠದ ಚನ್ನವೀರ ಶಿವಾಚಾರ್ಯರು ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಸವ ಭಾವಪೂಜೆ ಮಾಡುವರು.ಸಾವಿತ್ರಿಬಾಯಿ ಫುಲೆ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಂ.ಜಿ.ವಾಲಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ದಿ ನೇಚರ ಗ್ರೋ-ಮೋರ್ ಫೌಂಡೇಶನ್ ಅಧ್ಯಕ್ಷೆ ಸಂಗೀತಾ ನಾಡಗೌಡ , ದೇವಿಕಾ ಸುಬ್ಬರಾವ್ ಫೌಂಡೇಶನ್ ಅಧ್ಯಕ್ಷೆ ಪಲ್ಲವಿ ನಾಡಗೌಡ, ಗದಗ ನಿವೃತ್ತ ಉಪ ನಿರ್ದೇಶಕ ಎಸ್.ಡಿ.ಗಾಂಜಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಅರವಿಂದ ಹೂಗಾರ, ಬಿಇಒ ಬಿ.ಎಸ್.ಸಾವಳಗಿ, ಬಿ.ಆರ್.ಸಿ.ಆರ್.ಬಿ.ಧಮ್ಮೂರಮಠ,ಅಕ್ಷರದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್, ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ , ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಶ್ರೀ ಬೆಣ್ಣಿ, ಸಂಘದ ಜಿಲ್ಲಾಧ್ಯಕ್ಷ ಎ.ಬಿ.ನಾಯಕ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಎಚ್.ಮುದ್ನೂರ, ಸರ್ಕಾರಿ ನೌಕರರ ಸಂಘದ ಸದಸ್ಯ ಬಿ.ಎಸ್.ಶೇಖಣ್ಣವರ, ಆಲೂರ ಗ್ರಾಪಂ ಅಧ್ಯಕ್ಷೆ ಶೋಭಾ ಶೆಳ್ಳಗಿ ಆಗಮಿಸುವರು.

ಸಾಮಾಜಿಕ ಮೌಲ್ಯಗಳನ್ನು ಬಿತ್ತುವಲ್ಲಿ ಮಹಿಳೆಯರ ಪಾತ್ರದ ಕುರಿತು ಗದಗನ ನಿವೃತ್ತ ಉಪ ನಿರ್ದೇಶಕ ಎ.ಎನ್.ನಾಗರಳ್ಳಿ ಉಪನ್ಯಾಸ ನೀಡಲಿದ್ದಾರೆ ಎಂದು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಮಹಾದೇವಿ ವಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಔಷಧ ತಜ್ಞರು ಜೀವ ಉಳಿಸುವ ಮಾರ್ಗದರ್ಶಕರು-ಸಿದ್ಧಲಿಂಗ ದೇವರು

ಔಷಧ ತಜ್ಞರು ಜೀವ ಉಳಿಸುವ ಮಾರ್ಗದರ್ಶಕರು-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ಔಷಧ ತಜ್ಞರು ವೈದ್ಯರ ಬೆನ್ನೆಲುಬಾಗಿದ್ದು ಜೀವ ಉಳಿಸುವ ಮಾರ್ಗದರ್ಶಕರಂತೆ ಕೆಲಸ ಮಾಡುತ್ತಿದ್ದಾರೆ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ:                                            ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ

ಸೀರತ್ ಅಭಿಯಾನ :                                                           ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ-ಅಕ್ಬರ್‌ಅಲಿ ಉಡುಪಿ

ಸೀರತ್ ಅಭಿಯಾನ : ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ-ಅಕ್ಬರ್‌ಅಲಿ ಉಡುಪಿ

ಮುದ್ದೇಬಿಹಾಳ : ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ ಮೌಲ್ಯಗಳನ್ನು ಸಾರಿದ ಪ್ರವಾದಿ ಮಹಮ್ಮದ್ ಪೈಗಂಬರ ಅವರ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್‌ಅಲಿ ಉಡುಪಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮಹಮ್ಮದ್ ಸೀರತ್ ಅಭಿಯಾನ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರವಾದಿ ಮಹಮ್ಮದ್ ಅವರ ಸಂದೇಶ ಯಾವುದೇ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಏಕಲವ್ಯ ರೋಲರ್