ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮುದ್ದೇಬಿಹಾಳ : ಸ್ವಾತಂತ್ರö್ಯಕ್ಕಾಗಿ ಮಡಿದ ಮಹನೀಯರ ತ್ಯಾಗ ಬಲಿದಾನದ ಸ್ಮರಣೆ ಮಾಡುವ ಕಾರ್ಯ ಆಗಬೇಕು.ಜಾತಿ, ಧರ್ಮ ಮರೆತು ನಾವೆಲ್ಲ ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು.

ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಸೋಮವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.

ಯುವ ಪೀಳಿಗೆ,ವಿದ್ಯಾರ್ಥಿಗಳು ಮೊಬೈಲ್‌ದಲ್ಲಿ ಒಳ್ಳೆಯದನ್ನು ಗ್ರಹಿಸಬೇಕು.ಸ್ವಾತಂತ್ರ‍್ಯಕ್ಕಾಗಿ ದುಡಿದವರ ಚರಿತ್ರೆಯನ್ನು ಓದಬೇಕು.ದೇಶದ ಕೀರ್ತಿ ಹೆಚ್ಚಿಸಿ ಸಂಸ್ಕೃತಿ,ಆಟ,ಪಾಠದಲ್ಲಿ ಹೆಸರು ತರಬೇಕು ಎಂದರು.

ಕಾAಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಮಹಿಳೆಯರ ಅಸಮಾನತೆ ಸಂವಿಧಾನದ ಫಲದಿಂದಲೇ ನಿವಾರಣೆಯಾಗಿದೆ.ದೇಶದ ಐಕ್ಯತೆಗೆ ದುಡಿಯಬೇಕು.ಪ್ರಜೆಗಳೇ ಪ್ರಭುಗಳು ಎನ್ನುವ ಮಹತ್ವದ ಸಂದೇಶವನ್ನು ಸಂವಿಧಾನ ನೀಡಿದೆ.ಆದರೆ ಸಂವಿಧಾನ ಜಾರಿ ಬಂದಾಗಿನಿAದ ಬ್ರಷ್ಟಾಚಾರ ದೇಶದಲ್ಲಿ ಮುಗಿಲು ಮುಟ್ಟಿದೆ.ಶೇ.40 ರಷ್ಟು ಜನ ಈವರೆಗೂ ಯಾವುದೇ ಸೌಲಭ್ಯ ಪಡೆದುಕೊಳ್ಳುವುದಿಲ್ಲ ಎಂದು ಸ್ವತಃ ಸರ್ಕಾರದ ಕಾರ್ಯದರ್ಶಿಗಳೇ ಹೇಳಿರುವುದು ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎಂಬುದು ತೋರುತ್ತದೆ ಎಂದರು.

ತಾಪA ಇಒ ವೆಂಕಟೇಶ ವಂದಾಲ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಗಣ್ಯರಾದ ಎಂ.ಬಿ.ನಾವದಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಸಿಪಿಐ ಮೊಹ್ಮದ ಫಸಿವುದ್ದೀನ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ,ಡಾ.ಸತೀಶ ತಿವಾರಿ,ಡಾ.ಶಿವಾನಂದ ಮೇಟಿ,ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಪಿಎಸ್‌ಐ ಸಂಜಯ ತಿಪರೆಡ್ಡಿ, ಶಿವಲೀಲಾ ಕೊಣ್ಣೂರ,ವೀರೇಶ ಹೂಗಾರ ಇದ್ದರು.
ಸಂಗಮೇಶ ಶಿವಣಗಿ ಸಂಗಡಿಗರು ರಾಷ್ಟçಗೀತೆ ಹಾಡಿದರು. ಬಿ.ಇ.ಒ ಬಿ.ಎಸ್.ಸಾವಳಗಿ ಸ್ವಾಗತಿಸಿದರು.ಟಿ.ಡಿ.ಲಮಾಣಿ ನಿರೂಪಿಸಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ