ಕಾರ್ಮಿಕರು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಅಶ್ವಥ ಟಿ. ಮರಿಗೌಡ

ಕಾರ್ಮಿಕರು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಅಶ್ವಥ ಟಿ. ಮರಿಗೌಡ

ರಾಯಚೂರು: ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು.

ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ ನಗರದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯದಿಂದ ವಂಚಿತ ಕಾರ್ಮಿಕರನ್ನು ಗುರುತಿಸುವ ಕೆಲಸ ಸಂಘಟನೆ ಮಾಡುತ್ತದೆ. ಕಾರ್ಮಿಕರು ಸಂಘಟನೆ ಜೊತೆಗೆ ಕೈ ಜೋಡಿಸುವ ಮೂಲಕ ಕಾರ್ಮಿಕ ಕಾರ್ಡನಿಂದ

ದೊರೆಯುವ ಮದುವೆ ಸಹಾಯಧನ, ಹೆರಿಗೆ ಸಹಾಯಧನ, ಶಿಷ್ಯವೇತನ, ಅಪಘಾತ ಪರಿಹಾರ ಸಹಾಯಧನ, ಶಸ್ತ್ರ ಚಿಕಿತ್ಸೆ ವೈದ್ಯಕೀಯ ಸಹಾಯ ಆರೋಗ್ಯ ಸೌಲಭ್ಯ, ಪಿಂಚಣಿ ಭಾಗ್ಯ ಇತ್ಯಾದಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ಆಗುತ್ತಿದ್ದೂ ಇದನ್ನು ನಿಲ್ಲಿಸುವಂತೆ ಕಾರ್ಮಿಕ ಸಚಿವರಿಗೆ ಎಚ್ಚರಿಸಿದರು.

ತಾಲೂಕ ಅಧ್ಯಕ್ಷರನ್ನಾಗಿ ತಿಮಪ್ಪ, ಉಪಾಧ್ಯಕ್ಷರು ಈರಣ್ಣ, ಪ್ರಧಾನ ಕಾರ್ಯದರ್ಶಿಯನ್ನಾಗಿ ಸುನಿಲ್ ಕುಮಾರ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕರು ಪ್ರದೀಪ ಕೆ. ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿಡಿಕಿ, ವೆಂಕಟೇಶ, ಈರಪ್ಪ ವಲ್ಕಂದಿನ್ನಿ, ಸಚಿನ ಪವಾರ, ರವಿರಾಜ್, ಗೋಪಾಲ ದೊರೆ, ಚಂದ್ರಶೇಖರ, ಡಾ. ಶಿವು ರಾಠೋಡ ಮುಂತಾದ ಪದಾಧಿಕಾರಿಗಳು ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ