ಹೋರಾಟದ ಪರಿಣಾಮ ಮೀಸಲಾತಿ ಪರವಾಗಿ ತೀರ್ಪು: ಉಡಚಪ್ಪ ಮಳಗಿ

ಹೋರಾಟದ ಪರಿಣಾಮ ಮೀಸಲಾತಿ ಪರವಾಗಿ ತೀರ್ಪು: ಉಡಚಪ್ಪ ಮಳಗಿ

Ad
Ad

ಹಾವೇರಿ: ಡಾ.ಬಾಬಾಸಾಹೇಬ ಅಂಬೇಡ್ಕರ್ ಆಶಯದಂತೆ ಸಂವಿಧಾನ ಬದ್ಧವಾಗಿ, ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಳೆದ 30 ವರ್ಷಗಳಿಂದ ನಿರಂತರ, ಜಿಲ್ಲಾ, ರಾಜ್ಯ ಮಟ್ಟದ ಸಂವಾದ, ಚರ್ಚಾಕೂಟ, ಸಮಾವೇಶ, ಮುತ್ತಿಗೆ, ಹಲವಾರು ರೀತಿ ಜನಪರ ಹೋರಾಟ ಹಾಗೂ ನ್ಯಾಯಾಲಯದ ಹೋರಾಟಕ್ಕೆ ರಾಷ್ಟ್ರೀಯ ವಿಷಯವಾಗಿ ಚಳುವಳಿ ಮಾಡಿದ ಪರಿಣಾಮ ದೇಶದ ಸರ್ವೋಚ್ಚ ನ್ಯಾಯಾಲಯದ ಸಂವಿಧಾನ ಪೀಠದಲ್ಲಿ ಒಳಮೀಸಲಾತಿ ಪರವಾಗಿ ತೀರ್ಪು ಬಂದಿದೆ ಎಂದು ಉಡಚಪ್ಪ ಮಳಗಿ ಹರ್ಷ ವ್ಯಕ್ತಪಡಿದರು.

Ad
Ad

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ವತಿಯಿಂದ ದೇಶದ ಸರ್ವೋಚ್ಚ ನ್ಯಾಯಾಲಯದ ಸಂವಿಧಾನ ಪೀಠದಲ್ಲಿ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದನ್ನು ಸ್ವಾಗತಿಸಿ ಸಿಹಿ ಹಂಚಿ ಡಿ ಎಸ್ ಎಸ್ ರಾಜ್ಯ ಸದಸ್ಯರು ಉಡಚಪ್ಪ ಮಾಳಗಿಮಾತನಾಡಿದರು.

ಇಂತಹ ಐತಿಹಾಸಿಕ ತೀರ್ಪು ನೀಡಿದ ಸಂವಿಧಾನ ಪೀಠದ 7ಜನ ನ್ಯಾಯಾಧೀಶರಿಗೆ, ನ್ಯಾಯಾಲಯದಲ್ಲಿ ಹೋರಾಟ ನಡೆಸಿದ ಸಂಘಟನೆಗಳಿಗೆ, ಜನಪರ ಚಳುವಳಿಯಲ್ಲಿ ಭಾಗವಹಿಸಿದ ದಲಿತ ಚಳುವಳಿ ಹಾಗೂ ಇನ್ನಿತರ ಸಾಮಾಜಿಕ ಪರಿವರ್ತನೆಯ ಸಂಘಟನೆಗಳ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುವುದು ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ,ಎಂ ಆಂಜನೇಯ ಮಂಜಪ್ಪ ಮಾರೋಳ, ವೈ.ಎನ್.ಮಾಸೂರ, ಜಗದೀಶ್ ಹರಿಜನ, ಶಿವು ಮುದಿಮಲ್ಲಣ್ಣವರ, ರೇಣುಕಾ ಬಡಕಣ್ಣವರ, ಮಂಜುನಾಥ್ ದೊಡ್ಡಮರಿಯಮ್ಮನವರ, ಮಹೇಶಪ್ಪ ಶಾಕಾರ, ಬಸವಣ್ಣಪ್ಪ ಅರಳಿಹಳ್ಳಿ, ಶಂಭುಲಿಂಗಪ್ಪ ದಿವಟರ, ಕೃಷ್ಣಕಾಂತ ಹೊಳಿಯಪ್ಪನವರ, ಮಂಜುನಾಥ್ ಮಾಸೂರ, ಹನಮಂತಪ್ಪ ಹೌಶಿ, ಗೀತಾ ಹಳೆಶಿಡೆನೂರ, ರತ್ನವ್ವ ದೊಡ್ಡಮನಿ ಇತರರು ಇದ್ದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500