ದಲಿತರಿಗೆ ಸೇರಬೇಕಾದ 68 ಎಕರೆ DK ಶಿವಕುಮಾರ್ ಲಪಟಾಯಿಸಿದ್ದಾರೆ: HDK ಗಂಭೀರ ಆರೋಪ

ದಲಿತರಿಗೆ ಸೇರಬೇಕಾದ 68 ಎಕರೆ DK ಶಿವಕುಮಾರ್ ಲಪಟಾಯಿಸಿದ್ದಾರೆ: HDK ಗಂಭೀರ ಆರೋಪ

ರಾಮನಗರ: ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಎಚ್ಚರಿಕೆ ಕೊಟ್ಟರು.

ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದರು ಅವರು, ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೆಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ, ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದರು.

ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಹೆಚ್ಡಿಕೆ ಡಿಸಿಎಂ ಡಿಕೆಶಿಗೆ ನೇರ ಸವಾಲು ಹಾಕಿದರು.

ಈ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆಡಿದ್ದೀರಿ ಎಂದು ನನಗೆ ಗೊತ್ತಿದೆ. ನಾನು ಏನೂ ಮಾಡಿಯೇ ಇಲ್ಲ, ಸ್ವಚ್ಚವಾಗಿದ್ದೇನೆ ಎಂದು ಅಜ್ಜಯನ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಹೇಳಿದರು ಕುಮಾರಸ್ವಾಮಿ ಅವರು.

ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಮಾಡುವುದೂ ಇಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನ ಬೆಳೆಸಿದೆ. ನಾನು ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ನಾನು ಯಡಿಯೂರಪ್ಪ ಅವರಿಗೆ ಯಾವತ್ತೂ ದ್ರೋಹ ಮಾಡಿಲ್ಲ. ಬಿಜೆಪಿ‌-ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಅದಕೆ ಶಿವಕುಮಾರ್ ನಮ್ಮ ಮೈತ್ರಿ ಬಗ್ಗೆ ಹೊಟ್ಟೆ ಉರಿ ಅನುಭವಿಸುತ್ತಿದ್ದಾರೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೇಯದಾಗಬೇಕು. ನಾನು ಅಧಿಕಾರ ಕೇಳಿ ನಿಮ್ಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದಿರಿ ಶಿವಕುಮಾರ್. ನೀವು ಮರೆತು ಹೋಗಿದ್ದೀರಿ, ಒಮ್ಮೆ ನೆನಪುವಾಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ಟಾಂಗ್ ಕೊಟ್ಟರು.

ಡಾ.ಮಂಜುನಾಥ್ ಅವರು ಡಾಕ್ಟರ್ ಕೆಲಸ ಮಾತ್ರ ಮಾಡ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರಿಯುತ್ತಿದೆ. ಅವರ ಬಗ್ಗೆಯೂ ಶಿವಕುಮಾರ್ ಮಾತಾಡಿದ್ದಾರೆ. ಅವರ ಹತಾಶೆ, ನಿರಾಶೆ ನನಗೆ ಅರ್ಥ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ಗೃಹ ಸಚಿವರಾಗಿ ಒಬ್ಬ ದಲಿತ ಪೊಲೀಸ್ ಅಧಿಕಾರಿ ರಕ್ಷಣೆ ಮಾಡಲು ಪರಮೇಶ್ವರ್ ಅವರಿಂದ ಆಗಲಿಲ್ಲ. ಅಲ್ಲಿಗೆ ಅವರು ಇಪ್ಪತ್ತು ಲಕ್ಷ ಕೊಟ್ಟು ಪೋಸ್ಟಿಂಗ್ ಮಾಡಿಸಿಕೊಂಡಿದ್ದಾರೆ. ಈಗ ಅವರು ಅಲ್ಲೇ ಉಳಿಯಲು ಮೂವತ್ತು ಲಕ್ಷ ಕೊಡಬೇಕಂತೆ. ಒಬ್ಬ ಪೋಲಿಸ್ ಅಧಿಕಾರಿಯನ್ನೇ ರಕ್ಷಣೆ ಮಾಡಲಾಗದ ಈ ಸರ್ಕಾರಕ್ಕೆ ಜನರ ರಕ್ಷಣೆ ಮಾಡಲು ಸಾಧ್ಯವೇ? ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದರು.

ರಾಜಕೀಯ ನಿವೃತ್ತಿಯ ಸವಾಲು ಹಾಕಿದ HDK: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆ ಶಿವಕುಮಾರ್ ಹೊಡೆದುಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ‌ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಡಿಕೆಶಿಗೆ ಚಳಿ ಬಿಡಿಸಿದರು ಕೇಂದ್ರ ಸಚಿವ ಕುಮಾರಸ್ವಾಮಿ ಅವರು.

ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ‌ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ಯಾರಿಗೂ ಮೋಸ ಮಾಡಲಿಲ್ಲ ನಾನು. ನಾನು ವಂಚನೆ ಮಾಡಿ ಭೂಮಿ ಖರೀದಿಸಿದ್ದಿದ್ರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಸರ್ಕಾರದ ಬಗ್ಗೆ ನಮಗೆ ಅಸೂಯೆ ಇಲ್ಲ: ‌ಈ ಪಾದಯಾತ್ರೆ ಅಸೂಯೆಯಿಂದ ಹಮ್ಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅನ್ಕೊಂಡಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೀತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ