ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ ಅವರ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಪ್ರಭಾವಿಗಳ ಹೆಸರು ಕೇಳಿ ಬರುತ್ತಿದ್ದು, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.

ಪಿಎಸ್ಐ ಪರಶುರಾಮ ಅವರ ಪತ್ನಿ ಶ್ವೇತಾ ಅವರು ಏಳು ತಿಂಗಳ ಗರ್ಭಿಣಿ. ಅವರ ಕುಟುಂಬ ನಿರ್ವಹಣೆಗೆ ನನ್ನ ಎರಡು ತಿಂಗಳ ಶಾಸಕ ಸಂಬಳ ನೀಡುತ್ತೇನೆ ಹಾಗೂ ರಾಜ್ಯ ಸರ್ಕಾರವು ಸಹ ಮೃತ ಪಿಎಸ್ಐ ಕುಟುಂಬಕ್ಕೆ ನ್ಯಾಯ ಒದಗಿಸಿ ಆರ್ಥಿಕ ನೆರವು ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ನಗರ ಪೊಲೀಸ್ ಠಾಣೆಗೆ ಬಂದು ಇನ್ನು ಒಂದು ವರ್ಷವೂ ಪೂರ್ಣಗೊಂಡಿರಲಿಲ್ಲ. ಆಗಲೇ ಪಿಎಸ್ಐ ಪರಶುರಾಮ ಅವರಿಗೆ ವರ್ಗಾವಣೆಯಾಗಿದ್ದು ಅವೈಜ್ಞಾನಿಕ. ವರ್ಗಾವಣೆ ಜಿಲ್ಲೆಯಲ್ಲಿ ಹೆಚ್ಚಾಗಿದೆ.‌ ಗೃಹ ಇಲಾಖೆ ಹಾಗೂ‌ ಇಲಾಖೆ ಮೇಲಾಧಿಕಾರಿಗಳು ಪಿಎಸ್ಐ ಪರಶುರಾಮ ಅವರ ಸಾವಿಗೆ ಹಾಗೂ ಅವರ ಪತ್ನಿ ಶ್ವೇತಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಶಾಸಕ ಕಂದಕೂರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ