42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ : ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ : ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು ಅಶ್ಲೀಲತೆಯ ಸೋಂಕಿಲ್ಲದoತೆ ಪ್ರದರ್ಶನ ನೀಡಲು ತಾಕೀತು ಮಾಡಿದ್ದೇವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಬಾಲಾಜಿ ಹಾಗೂ ಜಿಲ್ಲಾ ಅಧ್ಯಕ್ಷ ಪುಂಡಲೀಕ ಮುರಾಳ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಇತರೆ ಸಂಘಟನೆಗಳ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಅಂಗವಾಗಿ ಮುದ್ದೇಬಿಹಾಳ ಪಟ್ಟಣದ ವಿಬಿಸಿ ಹೈಸ್ಕೂಲ್ ಆವರಣದಲ್ಲಿರುವ ಸಿದ್ದೇಶ್ವರ ವೇದಿಕೆಯಲ್ಲಿ ಜ.31 ರಂದು ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ.

ಖಾಸ್ಗತೇಶ್ವರ ಮಠದಿಂದ ಮದ್ಯಾಹ್ನ 3ಕ್ಕೆ ಸ್ವಾಮಿವಿವೇಕಾನಂದರ ಭಾವಚಿತ್ರದ ಮೆರವಣಿಗೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ.ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ದುರ್ಗಾದೇವಿ ಉಪಾಸಕ ಲಾಲ್‌ಲಿಂಗೇಶ್ವರ ಶರಣರು,ಮಾವಿನಭಾವಿಯ ಬಸವರಾಜ ಗುರೂಜಿ,ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಶಂಕರಗೌಡ ಹಿರೇಗೌಡರ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಬಾಲಾಜಿ ಸೇರಿದಂತೆ ಹಲವರು ಆಗಮಿಸುವರು.

ಸಂಜೆ 5ಕ್ಕೆ ಸ್ವಾಮಿ ವಿವೇಕಾನಂದರ ರಾಜ್ಯ, ರಾಷ್ಟç ಮತ್ತು ಅoತರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ರಾಷ್ಟ್ರೀಯ ಯುವ ವೈಭವ, ವಿವೇಕ ಯುವ ಚೈತನ್ಯ ಕೃತಿ ಹಾಗೂ ಧರ್ಮ ಯುದ್ಧ ದಿನದರ್ಶಿಕೆ ಲೋಕಾರ್ಪಣಾ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.

ದಿವ್ಯ ಸಾನಿಧ್ಯ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ,ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಅಕ್ಕಮಹಾದೇವಿ ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಯುವ ಸಬಲೀಕರಣ ಇಲಾಖೆಯ ಉಪನಿರ್ದೇಶಕ ರಮೇಶ ಎಂ.ಸಿ. ಪ್ರಶಸ್ತಿ ಪ್ರದಾನ ಮಾಡುವರು.ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್.ಬಾಲಾಜಿ ಅಧ್ಯಕ್ಷತೆ ವಹಿಸುವರು.

ಪ್ರಮುಖರಾದ ಎಂ.ಎನ್.ನಟರಾಜನ್, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ,ಬಾಲಾಜಿ ಶುರ‍್ಸ್ನ ಅಧೀಕ ಪಾಟೀಲ, ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ , ಸಮಾಜ ಸೇವಕಿ ಸಂಗೀತಾ ನಾಡಗೌಡ,ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಸಮಾಜ ಸೇವಕ ನೇತಾಜಿ ನಲವಡೆ ಆಗಮಿಸುವರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಯುವಕರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಲು ಯುವನೀತಿ ಜಾರಿಗೆ ಒತ್ತಾಯಿಸಲಾಗುತ್ತ ಬರುತ್ತಿದೆ.ರಾಜ್ಯದಲ್ಲೂ ಯುವ ನೀತಿ ಜಾರಿಗೆ ತರಬೇಕು ಎಂದು ಒತ್ತಾಯಿಸುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯುವ ಸಂಘಗಳ ಒಕ್ಕೂಟದ ಪದಾಧಿಕಾರಿಗಳಾದ ಸಂಗಣ್ಣ ಕಂಚ್ಯಾಣಿ, ಚಂದ್ರು ಕರೇಕಲ್,ಬಸವರಾಜ ದಡ್ಡಿ,ಸಾಬಣ್ಣ ಚಳ್ಳಗಿ, ವಿರೇಶ ಗುರುಮಠ, ಅಪ್ಪುಗೌಡ ಪಾಟೀಲ, ಮಹ್ಮದರಫೀಕ ಶಿರೋಲ,ಮಹಾಂತೇಶ ಬಿಜ್ಜೂರ, ಕೃಷ್ಣಾ ಕುಂಬಾರ, ದೀಪರತ್ನಶ್ರೀ, ರಾಜು ವಾಲೀಕಾರ, ಬಸವರಾಜ ಯಂಕoಚಿ, ಚಂದ್ರು ಮೂಕಿಹಾಳ ಇದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ