ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿಯಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತ್ ವಿಜಯಪುರ ಹಾಗೂ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಫೆಬ್ರವರಿ 13ರವರೆಗೆ ಜಿಲ್ಲಾದ್ಯಂತ ನಡೆಯಲಿದ್ದು ಜಿಲ್ಲೆಯಲ್ಲಿ ಕುಷ್ಠರೋಗವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕುಷ್ಠರೋಗವು ಮೈಕ್ರೋ ಬ್ಯಾಕ್ಟೋರಿಯಾಮ್ ಲೇಫ್ರಿ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಇದು ನರಗಳ ಹಾಗೂ ಚರ್ಮದ ಮೇಲೆ ಪರಿಣಾಮ ಬೀಳುತ್ತದೆ. ದೇಹದ ಯಾವುದೇ ಭಾಗದಲ್ಲಿ ತಿಳಿ-ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳ ಮೇಲೆ ಸ್ಪರ್ಶಜ್ಞಾನ ಇರುವುದಿಲ್ಲ.ಇಂಥ ಮಚ್ಚೆಗಳು ಕಂಡುಬAದಲ್ಲಿ ತಾಲೂಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸಿ ಚಿಕಿತ್ಸೆ ಪಡೆಯಬಹುದು ಎಂದರು.

ಈ ರೋಗಕ್ಕೆ ಬಹುವಿಧ ಔಷಧ ಚಿಕಿತ್ಸೆ ಮತ್ತು ಎಂಡಿಟಿ ಚಿಕೆತ್ಸೆಯಿಂದ ಸಂಪೂರ್ಣ ಗುಣಮುಖರಾಗಬಹುದು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಔಷಧಗಳನ್ನು ಉಚಿತವಾಗಿ ಪಡೆಯಬಹುದು. ಈ ರೋಗದಿಂದ ಭಯಪಡುವ ಅವಶ್ಯವಿಲ್ಲ. ಕುಷ್ಠ ರೋಗಿಗಳು ಶಾಪಗ್ರಸ್ಥರಲ್ಲ ಮತ್ತು ಕಳಂಕಿತರಲ್ಲ. ಕುಷ್ಠರೋಗಿಗಳನ್ನು ಸಮಾಜದಲ್ಲಿ ಯಾವುದೇ ತಾರತಮ್ಯ ಮಾಡದೆ ಗೌರವದಿಂದ ಕಾಣಬೇಕು ಎಂದರು.

ಕುಷ್ಠರೋಗದ ನಿರ್ಮೂಲನೆಗೆ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಬಿ.ಹೂಗಾರ, ಸಮುದಾಯ ಆರೋಗ್ಯ ಅಧಿಕಾರಿ ಸದಾಶಿವ ಹಿರೇಮಠ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ