Cafe blast: ಕೆಫೆ ಸ್ಫೋಟ ಪ್ರಕರಣ- ಆರೋಪಿಯಿಂದ ಸೀನ್ ರೀ ಕ್ರಿಯೆಟ್ (ವಿಡಿಯೋ ನೋಡಿ)

Cafe blast: ಕೆಫೆ ಸ್ಫೋಟ ಪ್ರಕರಣ- ಆರೋಪಿಯಿಂದ ಸೀನ್ ರೀ ಕ್ರಿಯೆಟ್ (ವಿಡಿಯೋ ನೋಡಿ)

ಬೆಂಗಳೂರು: ಎನ್‌ಐಎ 5 ತಿಂಗಳ ನಂತರ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರ್ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್ ಮಹಜರು ನಡೆಸುತ್ತಿದೆ.

ಎನ್‌ಐಎ ಕೆಫೆಗೆ ಆರೋಪಿಗಳನ್ನು ಕರೆತಂದು ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ನಿಂದ ಕ್ರೈಂ ಸೀನ್ ರೀ ಕ್ರಿಯೆಟ್ ಮಾಡಿಸುತ್ತಿದ್ದಾರೆ.

ಶಂಕಿತ ಉಗ್ರ ಕೃತ್ಯ ನಡೆದ ದಿನ ಎಲ್ಲಿಂದ ಬಂದ? ಹೇಗೆ ನಡೆದುಕೊಂಡು ಬಂದ? ಕೆಫೆ ಒಳಗಡೆ ಎಲ್ಲೆಲ್ಲಿ ಸುತ್ತಾಡಿದ್ದ? ಎಲ್ಲವನ್ನೂ ರೀ ಕ್ರಿಯೆಟ್ ಮಾಡಿ ತೋರಿಸುತ್ತಿದ್ದಾನೆ ಎನ್ನಲಾಗಿದೆ.

ಘಟನೆ ನಡೆದ ಆ ದಿನ ಧರಿಸಿದ್ದ ಬಟ್ಟೆ ಹಾಗೂ ಕ್ಯಾಪ್ ಧರಿಸಿಯೇ ಸೀನ್ ರೀ ಕ್ರಿಯೇಟ್ ಮಾಡಲಾಗುತ್ತಿದೆ. ಅವತ್ತಿನ ರೀತಿ, ಅಂದರೆ ಬ್ಲಾಕ್ ಬ್ಯಾಗ್ ಹಾಕಿಕೊಂಡು ಸನ್ನಿವೇಶವನ್ನು ಮರು ಸೃಷ್ಟಿ ಮಾಡಿಸಲಾಗುತ್ತಿದೆ.

ಹಾಗೆಯೇ ಇದೆಲ್ಲವನ್ನು ಎನ್‌ಐಎ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಲಘು ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ 10 ಮಂದಿ ಗಾಯಗೊಂಡಿದ್ದರು.

ಈ ಘಟನೆ ರಾಜಧಾನಿ ಬೆಂಗಳೂರು ನಗರದ ಜನರನ್ನು ಬೆಚ್ಚಿ ಬೀಳಿಸಿತ್ತು. ಅಲ್ಲದೆ ಬಿಜೆಪಿ ಇದನ್ನು ರಾಜಕೀಯ ಬಳಸಿಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತ್ತು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ