ಮುದ್ದೇಬಿಹಾಳ : ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿ ವಿಜಯಪುರ ಜಿಲ್ಲಾ ಘಟಕದಿಂದ ಕೊಡಮಾಡುವ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ತಾಲ್ಲೂಕಿನ ಕೋಳೂರು ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಂಧ್ಯಾ ಕಾಂಬಳೆ ಅವರನ್ನು ಆಯ್ಕೆ ಮಾಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಸಂಧ್ಯಾ ಅವರು ಸಲ್ಲಿಸಿದ ಸಮಾಜಮುಖಿ ಸೇವೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಫೆ.೮ ರಂದು ವಿಜಯಪುರ ಜಿಲ್ಲೆ ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆಯ ಮಾನಸ ಗಂಗೋತ್ರಿ ಮಾದರಿಯ ವಸತಿ ಶಾಲೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಕಾಂಬಳೆ ತಿಳಿಸಿದ್ದಾರೆ.




