ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ಸಾಕಷ್ಟು ಜನ ಸಂಪತ್ತು ಹೊಂದಿದವರಿದ್ದಾರೆ.ಆದರೆ ಕೊಡುವ ಮನಸ್ಸು ಎಲ್ಲರಲ್ಲೂ ಇರುವುದಿಲ್ಲ.ನಿಸ್ವಾರ್ಥದಿಂದ ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ ಹೇಳಿದರು.

ಪಟ್ಟಣದ ನೇತಾಜಿ ನಗರದಲ್ಲಿ ಮಂಗಳವಾರ ಕಡುಬಡ ಮಹಿಳೆಯರಿಗೆ ಶಿವರಾತ್ರಿ ಹಬ್ಬದ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ ಮಾಡಿ ಅವರು ಮಾತನಾಡಿದರು.

ಸಮಾಜದಲ್ಲಿ ಸಾಕಷ್ಟು ಜನ ನಿರ್ಗತಿಕರಿರುತ್ತಾರೆ.ನಾವು ಬರುವಾಗ ಏನು ತಂದಿಲ್ಲ,ಹೋಗುವಾಗಲೂ ಏನೂ ಒಯ್ಯುವುದಿಲ್ಲ.ಆದರೆ ಜೀವಿತಾವಧಿಯಲ್ಲಿ ನಾಲ್ಕು ಜನರಿಗೆ ಸಹಾಯ ಆಗುವ ಕೆಲಸ ಮಾಡಿದರೆ ನಮಗೆ ಆತ್ಮತೃಪ್ತಿ ದೊರೆಯುತ್ತದೆ.ಕೆಲವೇ ಜನಕ್ಕೆ ಹಬ್ಬಕ್ಕೆ ಆಗುವಷ್ಟು ದಿನಸಿ,ಬಟ್ಟೆ ಕೊಟ್ಟಿರುವ ಉದ್ದೇಶ ನಮ್ಮ ಕುಟುಂಬದಿOದ ಕಳೆದ ಮೂವ್ವತ್ತು ವರ್ಷಗಳಿಂದ ಈ ಸೇವೆ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ನೇತಾಜಿ ನಗರದ ನಿವಾಸಿ ರೇಣುಕಾ ಬಾಗೇವಾಡಿ ಮಾತನಾಡಿ, ಸಮಾಜದಲ್ಲಿ ಉಳ್ಳವರು ಸಾಕಷ್ಟು ಜನ ಇದ್ದಾರೆ.ಆದರೆ ಕೊಡುವ ಮನಸ್ಸು ಇರುವುದಿಲ್ಲ.ಆದರೆ ಕಾಶೀಬಾಯಿ ರಾಂಪೂರ ಅವರು ನಮ್ಮ ಹಿಂದುಳಿದ ಪ್ರದೇಶಕ್ಕೆ ಬಂದು ಕಡುಬಡ,ನಿರ್ಗತಿಕರನ್ನು ಗುರುತಿಸಿ ಕಿಟ್ ವಿತರಿಸಿರುವುದನ್ನು ಅಭಿನಂದಿಸುತ್ತೇವೆ.ಅವರ ಜನಸೇವೆ ನಿರಂತರವಾಗಿ ಸಾಗಲಿ ಎಂದು ಹೇಳಿದರು.

ನೇತಾಜಿ ನಗರದ ನಿವಾಸಿ ಸುಜಾತಾ ಬಂಡಿವಡ್ಡರ ಮಾತನಾಡಿದರು.ವಿ.ಎಚ್.ಪಿ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ,ಸುವರ್ಣಾ ಕತ್ತಿ,ಬಿಜೆಪಿ ಮುಖಂಡ ಶೇಖರ ಢವಳಗಿ,ಶಿವಮ್ಮ ವಡ್ಡರ ಇದ್ದರು.ಶಿವರಾತ್ರಿ ಹಬ್ಬದ ಆಚರಣೆ ಸಲುವಾಗಿ ಹತ್ತು ಜನಕ್ಕೆ ದಿನಸಿ ಕಿಟ್, ಸೀರೆ,ನಗದು ಹಣಕಾಸಿನ ಸಹಾಯ ಮಾಡಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ