ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಮಾದಿಗ ಮತ್ತು ಸಂಬoಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮುದ್ದೇಬಿಹಾಳ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮಾದಿಗ ಮತ್ತು ಸಂಬAಧಿತ ಉಪಜಾತಿಗಳ ಸಂಘಟನೆಗಳ ಪದಾಧಿಕಾರಿಗಳು, ದಲಿತಪರ ಸಂಘಟನೆ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೆಲವೆಡೆ ಅರ್ಧಮರ್ಧ ತೆರೆದಿದ್ದ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಲು ಸಂಘಟನೆಯವರು ತಿಳಿ ಹೇಳಿ ಪ್ರತಿಭಟನೆ ನಡೆಸಿದರು.

ಸಮಾಜದ ಮುಖಂಡ ಬಸವರಾಜ ಪೂಜಾರಿ(ಸಿದ್ದಾಪೂರ ಪಿ.ಟಿ) ಮಾತನಾಡಿ, ಒಳ ಮೀಸಲಾತಿ ಜಾರಿಗೊಳಿಸದೆ ನೇಮಕಾತಿ ಪ್ರಕ್ರಿಯೆ ಮುಂದುವರಿಸುವ ಸರ್ಕಾರದ ನಡೆ ಸಾಮಾಜಿಕ ನ್ಯಾಯಕ್ಕೆ ಧಕ್ಕೆ ಉಂಟುಮಾಡುತ್ತಿದೆ.ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನದ ಹಿನ್ನೆಲೆ ರಾಜ್ಯ ಸರ್ಕಾರ ಕಾಯ್ದೆ ರೂಪಿಸಿ ರಾಜ್ಯಪಾಲರಿಂದ ಅಂಕಿತ ಪಡೆದಿರುವುದು ಮಾದಿಗ ಸಮುದಾಯದ ಸುಮಾರು 35 ವರ್ಷಗಳ ಹೋರಾಟಕ್ಕೆ ದೊರೆತ ಐತಿಹಾಸಿಕ ಜಯವಾಗಿದೆ. ಆದರೂ ಒಳ ಮೀಸಲಾತಿ ಜಾರಿಗೊಳಿಸದೆ ನೇಮಕಾತಿ ನಡೆಸಲು ಸರ್ಕಾರ ಮುಂದಾಗಿರುವುದು ಮಾದಿಗ ಮತ್ತು ಸಂಬoಧಿತ ಜಾತಿಗಳಿಗೆ ಅನ್ಯಾಯವನ್ನುಂಟು ಮಾಡುವ ಹುನ್ನಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಕೀಲರಾದ ಕೆ.ಬಿ.ದೊಡಮನಿ ಮಾತನಾಡಿ, ಸರ್ಕಾರ ಫೆ.27 ರಂದು ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆದು, ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ಶಿಫಾರಸ್ಸಿನಂತೆ ಮಾದಿಗ ಮತ್ತು ಸಂಬoಧಿತ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಅಂಬೇಡ್ಕರ್ ಸರ್ಕಲ್‌ಗೆ ಆಗಮಿಸಿದ ಪ್ರತಿಭಟನಾಕಾರರನ್ನು ಭೇಟಿಯಾದ ತಹಶೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಸಾವಿರಾರು ಹುದ್ದೆಗಳನ್ನು ಒಳ ಮೀಸಲಾತಿ ಆಧಾರದಲ್ಲಿ ಭರ್ತಿ ಮಾಡಬೇಕು.ಸರ್ಕಾರ ತಕ್ಷಣ ಸ್ಪಂದಿಸಿ ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಮುದ್ದೇಬಿಹಾಳ ಬಂದ್ ಹಿನ್ನೆಲೆಯಲ್ಲಿ ಬಸ್ ಸಂಚಾರ್ ಸ್ಥಗಿತಗೊಂಡಿತ್ತು.ಪಟ್ಟಣದ ಎಲ್ಲಾ ವ್ಯಾಪಾರಸ್ಥರ ಅಂಗಡಿ-ಮುಗ್ಗಟ್ಟುಗಳು ಬಂದ್ ಆಗಿದ್ದು, ವ್ಯಾಪಾರ ವ್ಯವಹಾರಗಳು ಸ್ಥಗಿತಗೊಂಡಿದ್ದವು.ಸಿಪಿಐ ಮೊಹ್ಮದಫಸಿವುದ್ದೀನ್ ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಬೀಡು ಬಿಟ್ಟು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ನಿವಾಸಕ್ಕೂ ಪೊಲೀಸ್ ಭದ್ರತೆ ನೀಡಲಾಗಿತ್ತು.

ಪ್ರತಿಭಟನೆಯಲ್ಲಿ ಹೋರಾಟಗಾರರಾದ ತಿಪ್ಪಣ್ಣ ದೊಡಮನಿ, ಬಾಲಚಂದ್ರ ಹುಲ್ಲೂರ,ಸುಭಾಸ ಕಟ್ಟಿಮನಿ(ಕಾಳಗಿ), ಮುತ್ತಪ್ಪ ಪೂಜಾರಿ, ಮಾರುತಿ ಸಿದ್ದಾಪೂರ, ಆನಂದ ಮುದೂರ, ಭೀಮರಾಯ ಹುಲ್ಲೂರ, ಕೆ ಬಿ ದೊಡಮನಿ,ರವಿ ಬಸರಕೋಡ,ಪರಶುರಾಮ ಶಿಂಧೆ, ಮಾಹಾಂತೇಶ ಕಂದಗನೂರ, ಹುಲಗೆಪ್ಪ ನಾಗರಬೆಟ್ಟ, ಶ್ರೀಧರ ಹಳ್ಳೂರ, ಬಸವರಾಜ ನಾಗರಬೆಟ್ಟ ಸೇರಿದಂತೆ ತಾಲ್ಲೂಕಿನಿಂದ ಆಗಮಿಸಿದ್ದ ದಲಿತಪರ ಸಂಘಟನೆ ಹೋರಾಟಗಾರರು ಪಾಲ್ಗೊಂಡಿದ್ದರು.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ