ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪನೆ, ಹಾಗೂ ಹೊಸ ‘ಮತ್ಸ್ಯದರ್ಶಿನಿ’ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ ಸರ್ಕಾರದ ಕ್ರಮ ಶ್ಲಾಘನೀಯ. ಈ ಯೋಜನೆಗಳು ಮೀನುಗಾರಿಕೆ ಮಾರುಕಟ್ಟೆ ವಿಸ್ತರಣೆಗೆ ವರದಾನವಾಗಲಿವೆ ಎಂದು ಅವರು ತಿಳಿಸಿದ್ದಾರೆ.
ಆದರೆ, ಕಡಲಿಗೆ ಇಳಿಯುವ ಮೀನುಗಾರರ ಬದುಕಿನ ಅತ್ಯಂತ ಸೂಕ್ಷ್ಮ ಹಾಗೂ ಜರೂರತ್ತಿನ ಬೇಡಿಕೆಗಳನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
“ಮೀನುಗಾರರ ಕಲ್ಯಾಣ ಎಂದರೆ ಕೇವಲ ಮಾರುಕಟ್ಟೆ ನಿರ್ಮಾಣವಲ್ಲ. ಪ್ರತಿದಿನ ಪ್ರಾಣದ ಹಂಗು ತೊರೆದು ಸಮುದ್ರಕ್ಕಿಳಿಯುವ ಮೀನುಗಾರನಿಗೆ ಈ ಬಜೆಟ್‌ನಲ್ಲಿ ‘ಜೀವ ವಿಮೆ’ಯ ಭದ್ರತೆ ಮಿಸ್ ಆಗಿದೆ. ಮೀನುಗಾರರ ಸಾವಿನ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಆಸರೆಯಾಗಬೇಕಿದ್ದ ಪರಿಹಾರದ ಮೊತ್ತ ಹೆಚ್ಚಳದ ಬಗ್ಗೆ ಸರ್ಕಾರ ಮೌನ ವಹಿಸಿದೆ. ಇದರ ಜೊತೆಗೆ, ಬಡ ಮೀನುಗಾರರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ಪ್ರೋತ್ಸಾಹಧನ ಹಾಗೂ ಮೀನುಗಾರರ ಕುಟುಂಬಗಳ ಆರ್ಥಿಕ ನಿರ್ವಹಣೆಗೆ ಸಿಗಬೇಕಿದ್ದ ನೇರ ನೆರವು ಬಜೆಟ್‌ನಲ್ಲಿ ಸಂಪೂರ್ಣವಾಗಿ ಕೈಬಿಟ್ಟು ಹೋಗಿರುವುದು ದುರಾದೃಷ್ಟಕರ. ಮೂಲಸೌಕರ್ಯದ ಜೊತೆಗೆ ಮೀನುಗಾರನ ಜೀವ ಹಾಗೂ ಆತನ ಕುಟುಂಬದ ಭವಿಷ್ಯಕ್ಕೂ ಸರ್ಕಾರ ಆದ್ಯತೆ ನೀಡಬೇಕಿತ್ತು” ತಮ್ಮ ಹೇಳಿಕೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ
ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ
Latest News
ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್
ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ
ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!
ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ
ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ
ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ
ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ
ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ
ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ
ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ
ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ







