ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾರ್ಟರ್ಸ್ನ ಸ್ಥಳವನ್ನು ಶನಿವಾರ ಪೊಲೀಸ್ ಅಧಿಕಾರಿಗಳು,ನಗರದ ಗಣ್ಯರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸರಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಗ್ರಾಮೀಣ ಪೊಲೀಸ್ ಠಾಣೆ ಆರಂಭಿಸಲಾಗುವುದು ಎಂದು ತಿಳಿಸಿದೆ.ನಾನು ಯಾವ ಠಾಣೆ ಎಲ್ಲಿರಬೇಕು ಎಂಬುದನ್ನು ಹೇಳುವುದಿಲ್ಲ.ಕೆಲವು ಇಲಾಖೆಗಳ ಆಡಳಿತದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ.ಇಲ್ಲಿನ ಜಾಗೆಯನ್ನು ಪೊಲೀಸ್ ಇಲಾಖೆಯವರಿಗೆ ನೀಡಲಾಗುತ್ತಿದ್ದು ಅದನ್ನು ಸಮರ್ಪಕ ರೀತಿಯಲ್ಲಿ ತಾಲ್ಲೂಕು,ನಗರದ ಜನರಿಗೆ ಅನುಕೂಲ ಆಗುವಂತೆ ಬಳಕೆ ಮಾಡಿಕೊಳ್ಳಲು ತಿಳಿಸಿದ್ದೇನೆ ಎಂದು ಹೇಳಿದರು.

ಅಬಕಾರಿ ಹಾಗೂ ಪೊಲೀಸ್ ಇಲಾಖೆ ಮಧ್ಯೆ ಜಾಗೆಯ ಕುರಿತು ಇದ್ದ ವಿವಾದದ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ಈ ಹಿಂದೆ ಅಬಕಾರಿ ಪೊಲೀಸ್ ಎರಡೂ ಇಲಾಖೆಗಳು ಒಂದೆ ಆಗಿದ್ದವು.ನಾನು ಶಾಸಕನಾಗಿದ್ದ ಅವಧಿಯಲ್ಲಿ ಹಳೇ ತಹಶೀಲ್ದಾರ ಕಚೇರಿಯಲ್ಲಿ ಪೊಲೀಸ್ ಠಾಣೆ ಆರಂಭಿಸಲಾಗಿತ್ತು.ಸದ್ಯದ ಈ ಜಾಗೆಯಲ್ಲಿ ಅಬಕಾರಿ ಇಲಾಖೆಯವರು ಕೆಲಸ ಮಾಡುವಂತೆ ತಿಳಿಸಿದ್ದೆ.ಬದಲಾದ ಸನ್ನಿವೇಶದಲ್ಲಿ ಎರಡು ಇಲಾಖೆಗಳು ಪ್ರತ್ಯೇಕಗೊಂಡಿದ್ದು ಊರಿನ ಹೃದಯ ಭಾಗವಾಗಿರುವ ಈ ಸ್ಥಳದಲ್ಲಿ ಜನರ ಭದ್ರತೆ,ಸುರಕ್ಷತೆ ದೃಷ್ಟಿಯಿಂದ ಪೊಲೀಸ್ ಠಾಣೆಯನ್ನು ಇಲ್ಲಿ ಆರಂಭಿಸುವುದು ಸೂಕ್ತ ಎಂದು ನಿರ್ಧರಿಸಿ ಈ ತೀರ್ಮಾನ ಮಾಡಲಾಗಿದೆ.ಅಧಿಕಾರಿಗಳು,ಗುತ್ತಿಗೆದಾರರ ಮನವೊಲಿಸಿ ಸಾಧ್ಯವಾದಷ್ಟು ಬೇಗನೇ ಇಲ್ಲಿ ಠಾಣೆ ಆರಂಭಕ್ಕೆ ಕ್ರಮ ಕೈಗೊಳ್ಳಲು ಇಲಾಖೆಯವರಿಗೆ ತಿಳಿಸಿರುವುದಾಗಿ ಹೇಳಿದರು.

ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಇಳಕಲ್,ಇಂಡಿ ಭಾಗದಲ್ಲಿ ಪೊಲೀಸ್ ಠಾಣೆಗಳು ಬಸ್ ನಿಲ್ದಾಣದ ಸಮೀಪದಲ್ಲಿಯೇ ಇವೆ.ಈಗಿರುವ ಮುದ್ದೇಬಿಹಾಳ ಪೊಲೀಸ್ ಠಾಣೆಯನ್ನು ಗ್ರಾಮೀಣ ಠಾಣೆಗೆ ಬಿಟ್ಟುಕೊಟ್ಟು ಬಸ್ ನಿಲ್ದಾಣದ ಪಕ್ಕದಲ್ಲಿರುವ ಈ ಜಾಗೆಯಲ್ಲಿ ಮುದ್ದೇಬಿಹಾಳದ ನಗರ ಪೊಲೀಸ್ ಠಾಣೆಯನ್ನು ಆರಂಭಿಸಿದರೆ ಜನರಿಗೆ ಅನುಕೂಲವಾಗಲಿದ್ದು ಈ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಗಣ್ಯರಾದ ಎಂ.ಬಿ.ನಾವದಗಿ,ಕೆಪಿಸಿಸಿ ಸದಸ್ಯ ರಮೇಶ ಓಸ್ವಾಲ್,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸದು ಮಠ, ಡಾ.ವಿಜಯಕುಮಾರ ಗೂಳಿ,ಲಕ್ಷö್ಮಣ ಲಮಾಣಿ ಮೊದಲಾದವರು ಇದ್ದರು.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ