ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಯುಗಾದಿ ಹಬ್ಬದ ನಿಮಿತ್ಯ ತಾಲೂಕಿನ ಖಿಲಾರಹಟ್ಟಿ ಗ್ರಾಮದ ಕಾಡಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.21 ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ ಎಂ.ಎನ್.ಮದರಿ(ಪೂಜಾರಿ) ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ನಮ್ಮ ಮನೆಯ ದೇವರು ಸುರಪೂರ ತಾಲ್ಲೂಕಿನ ಮಾರನಾಳ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವರಾಗಿದ್ದು ಖಿಲಾರಹಟ್ಟಿಯಲ್ಲಿಯೇ ಬೀರಲಿಂಗೇಶ್ವರನಿಗೆ ದೇವಸ್ಥಾನ ಕಟ್ಟಿಸಿದ್ದೇವೆ.ಕಾಡಸಿದ್ಧೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರೆ ಮಾ.20 ರಂದು ಜರುಗಲಿದ್ದು ಅಂದು ಮಾರನಾಳ, ಕಣಕಾಲ, ಇವಣಗಿ, ವಡವಡಗಿ, ನಾಗರಾಳ, ಖಿಲಾರಹಟ್ಟಿ, ನಾಗರಬೆಟ್ಟ, ಅಡವಿ ಸೋಮನಾಳ, ಗೋನಾಳ, ಎಣ್ಣಿವಡಗೇರಿ, ಅಮರಗೋಳ ಗ್ರಾಮಗಳಿಂದ ದೇವರ ಪಲ್ಲಕ್ಕಿಗಳು ಖಿಲಾರಹಟ್ಟಿಗೆ ಆಗಮಿಸಿ ಪೂಜಿಸಲಾಗುತ್ತದೆ ಎಂದು ಹೇಳಿದರು.

ಮಾ.21 ರಂದು ಮದ್ಯಾಹ್ನ 12ಕ್ಕೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಗತೀರ್ಥದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ,ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ,ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ವಹಿಸುವರು. ಸಾನಿಧ್ಯವನ್ನು ಯರಝರಿಯ ಮಲ್ಲಾರಲಿಂಗ ಪ್ರಭುಗಳು, ಸರೂರಿನ ಶಿವಯ್ಯ ಗುರುವಿನ,ಖಿಲಾರಹಟ್ಟಿಯ ರಮಾನಂದ ಸ್ವಾಮೀಜಿ,ಸಿದ್ದಾಪೂರದ ಅರವಿಂದ ಒಡೆಯರ,ಸಾಲವಾಡಗಿಯ ದೊಡ್ಡ ಸಣ್ಣೆಕಪ್ಪ ಮುತ್ಯಾ,ತಿಂತಣಿ ಬ್ರಿಜ್‌ನ ಸಿದ್ದಬೀರ ದೇವರು, ಮಾಳಳ್ಳಿ ಕೆಂಚರಾಯ ಪೂಜಾರಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ,ಜಿಪಂ ಮಾಜಿ ಅಧ್ಯಕ್ಷ ಗಂಗಾಧರ ನಾಡಗೌಡ,ಕಾಂಗ್ರೆಸ್ ಧುರೀಣ ಶಾಂತಗೌಡ ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಧ್ಯಕ್ಷರು ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾದ ಎನ್.ಎಸ್.ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಅತಿಥಿಗಳಾಗಿ ವಕೀಲರಾದ ಬಿ.ಜಿ.ಜಗ್ಗಲ, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಆರ್.ಬಿರಾದಾರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಜಿಪಂ ಮಾಜಿ ಸದಸ್ಯ ಎನ್.ಎಸ್.ಬಪ್ಪರಗಿ,ಬಿ.ಎಸ್.ಶಿರೋಳ,ವಕೀಲರಾದ ಎಂ.ಎಚ್.ಹಾಲಣ್ಣವರ,ಸAತ ಕನಕದಾಸ ಶಾಲೆಯ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ,ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ,ತಾಪಂ ಮಾಜಿ ಅಧ್ಯಕ್ಷ ವಾಯ್.ಎಚ್.ವಿಜಯಕರ್, ಪುರಸಭೆ ಮಾಜಿ ಸದಸ್ಯೆ ಸಂಗಮ್ಮ ದೇವರಳ್ಳಿ, ಮಿಣಜಗಿ ಗುತ್ತಿಗೆದಾರ ಎಚ್.ಎಮ್.ನಾಯಕ,ಹರನಾಳದ ಎಂ.ಎಸ್.ಬೊಮ್ಮನಹಳ್ಳಿ,ಪುರಸಭೆ ಸ್ಥಾಯಿ ಸಮೀತಿ ಮಾಜಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಯರಝರಿ ಕಾಂಗ್ರೆಸ್ ಮುಖಂಡ ಮಲ್ಲಣ್ಣ ಅಪರಾಧಿ,ನಿಡಗುಂದಿ ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತಣ್ಣ ಮುತ್ತಣ್ಣವರ, ನಾಗರಬೆಟ್ಟ ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದರಾಮಪ್ಪಗೌಡ ಪ್ಯಾಟಿ,ಮೂಕಿಹಾಳದ ಕಾಂಗ್ರೆಸ್ ಧುರೀಣ ಕಾಸೀಂ ಪಟೇಲ್,ತಾಳಿಕೋಟಿ ಕುರುಬರ ಸಂಘದ ಅಧ್ಯಕ್ಷ ಸಾಯಬಣ್ಣ ಆಲ್ಯಾಳ,ಹುಲ್ಲೂರ ಕಾಂಗ್ರೆಸ್ ಧುರೀಣ ಸುರೇಶ ಹಳೇಮನಿ,ಪಂಜುರ್ಲಿ ಹೊಟೇಲ್ ಮಾಲೀಕ ವಿಜಯ ಪೂಜಾರಿ ಆಗಮಿಸುವರು ಎಂದು ತಿಳಿಸಿದರು.

ಮಾ.22 ರಂದು ಬೆಳಗ್ಗೆ 10ಕ್ಕೆ ರಂಗೋಲಿ ಸ್ಪರ್ಧೆ,ಸಂಜೆ 7ಕ್ಕೆ ಖೋಖೋ ಸ್ಪರ್ಧೆ ನಡೆಯಲಿದೆ.ಮದ್ಯಾಹ್ನ 12ಕ್ಕೆ ತೆರಬಂಡಿ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.ಕಾಂಗ್ರೆಸ್ ಧುರೀಣ ವಾಯ್.ಎಚ್.ವಿಜಯಕರ್ ಮಾತನಾಡಿ, ಬಡವರು,ಕಾರ್ಮಿಕರು,ಅಸಹಾಯಕರ ನೆರವಿಗೆ ಸಮಾಜ ಸೇವಕ ಎಂ.ಎನ್.ಮದರಿ ಅವರು ಕೈಗೊಳ್ಳುತ್ತಿರುವ ಕಾರ್ಯಗಳು ಜನರಿಗೆ ಅನುಕೂಲ ಒದಗಿಸುತ್ತಿವೆ.ಮುಂದಿನ ದಿನಗಳಲ್ಲಿ ಹೆಚ್ಚಿನ ಜನಸೇವೆ ಮಾಡುವ ಅವಕಾಶ ಅವರಿಗೆ ಒದಗಿ ಬರಲಿ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ಮುಖಂಡ ಎಂ.ಬಿ.ಕೆಸರಟ್ಟಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ, ಬಸವರಾಜ ಗೂಡಲಮನಿ, ಚಂದ್ರು ಹಿರೇಮಠ, ಚಂದ್ರು ಜೋಗಿ ಮೊದಲಾದವರು ಇದ್ದರು.


ಟಗರಿನ ಕಾಳಗ ಸ್ಪರ್ಧೆಗೆ ಪ್ರವೇಶ ಉಚಿತ :
ಮಾ.21 ರಂದು ಸಂಜೆ 6ಕ್ಕೆ ಟಗರಿನ ಕಾಳಗ ಸ್ಪರ್ಧೆ ನಡೆಯಲಿದ್ದು ಪ್ರವೇಶ ಉಚಿತವಾಗಿದೆ ಎಂದು ತಿಳಿಸಿದರು.ಆರು,ನಾಲ್ಕು,ಎರಡು ಹಲ್ಲಿನ ಟಗರುಗಳ ಕಾಳಗ ಸ್ಪರ್ಧೆ ನಡೆಯಲಿದ್ದು ಆಕರ್ಷಕ ನಗದು ಬಹುಮಾನ ಇರಲಿದೆ ಎಂದು ತಿಳಿಸಿದರು.ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವರು ಮೊ.9980394710,9972392774,9980529772,9972296782 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ