ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ

ತೊಗರಿ ಖರೀದಿ ಕೇಂದ್ರಕ್ಕೆ ಪ್ರಸ್ತಾವನೆ :                                 ಕೇಸಾಪೂರ PKPSಗೆ ಪೆಟ್ರೋಲ್ ಬಂಕ್ ಮಂಜೂರಿ

ತೊಗರಿ ಖರೀದಿ ಕೇಂದ್ರಕ್ಕೆ ಪ್ರಸ್ತಾವನೆ : ಕೇಸಾಪೂರ PKPSಗೆ ಪೆಟ್ರೋಲ್ ಬಂಕ್ ಮಂಜೂರಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ರೈತರಿಗೆ ಅನುಕೂಲ ಒದಗಿಸಿಕೊಡಲು ನಮ್ಮ ಸಂಘಕ್ಕೆ ಮಂಜೂರಾಗಿದ್ದ ಮದ್ಯದಂಗಡಿಯನ್ನು

ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಹೊಸ ಇತಿಹಾಸ:   ಟೀಕೆಗಳಿಗೆ ಸಾಧನೆಯೇ ಉತ್ತರ : ಒಂದೇ ಶಾಖೆಯಿಂದ 225 ಮೆಡಿಕಲ್ ಸೀಟು..!

ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಹೊಸ ಇತಿಹಾಸ: ಟೀಕೆಗಳಿಗೆ ಸಾಧನೆಯೇ ಉತ್ತರ : ಒಂದೇ ಶಾಖೆಯಿಂದ 225 ಮೆಡಿಕಲ್ ಸೀಟು..!

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಯೊoದು ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಇತಿಹಾಸ ನಿರ್ಮಿಸಿದೆ.

ಪೌರಕಾರ್ಮಿಕರಿಗೆ 3.50 ಲಕ್ಷ ರೂ.ವಿಶೇಷ ಭತ್ಯೆ: ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರು-ಬಿರಾದಾರ

ಪೌರಕಾರ್ಮಿಕರಿಗೆ 3.50 ಲಕ್ಷ ರೂ.ವಿಶೇಷ ಭತ್ಯೆ: ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರು-ಬಿರಾದಾರ

ಮುದ್ದೇಬಿಹಾಳ : ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರಂತೆ ಕಾರ್ಯನಿರ್ವಹಿಸುತ್ತಿದ್ದು ಅವರ ಸೇವೆ ಅನನ್ಯವಾದದ್ದು ಎಂದು

ಉದ್ಯಮಿ ಶರಣು ಸಜ್ಜನರಿಗೆ ಅಭಿನಂದನೆ:                                       ‘ನಿನ್ನ ನೋಡಿಕೊಳ್ತೀನಿ ಅನ್ನೋರು ಯಾರೂ ಉಳಿದಿಲ್ಲ’-ಕೂಚಬಾಳ

ಉದ್ಯಮಿ ಶರಣು ಸಜ್ಜನರಿಗೆ ಅಭಿನಂದನೆ: ‘ನಿನ್ನ ನೋಡಿಕೊಳ್ತೀನಿ ಅನ್ನೋರು ಯಾರೂ ಉಳಿದಿಲ್ಲ’-ಕೂಚಬಾಳ

ಮುದ್ದೇಬಿಹಾಳ : ಸಮಾಜದಲ್ಲಿ ನಿನ್ನ ನೋಡಿಕೊಳ್ತೀನಿ ಎಂದವರು ಯಾರೂ ಉಳಿದಿಲ್ಲ. ಬಾಗಿದ್ದು ಮಾತ್ರ ಬಹಳ ದಿನ ಉಳಿಯುತ್ತದೆ.ಬೀಗಿದ್ದು ಬಹಳ ದಿನ ಉಳಿಯುವುದಿಲ್ಲ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಉದ್ಯಮಿ ಶರಣು ಸಜ್ಜನ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಉದ್ಯಮ ಕ್ಷೇತ್ರದಲ್ಲಿ ಬೆಳವಣಿಗೆ ಕಂಡಿರುವ,

9.49 ಲಕ್ಷ ರೂ.ಲಾಭ :                                                           ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ಈ ಆರ್ಥಿಕ ವರ್ಷದಲ್ಲಿ ಒಟ್ಟು 4.47 ಕೋಟಿ ರೂ.ಸಾಲ ರೈತರಿಗೆ ಹಂಚಿಕೆ ಮಾಡಲಾಗಿದ್ದು ಸಂಘವು ಒಟ್ಟು 9.49 ಲಕ್ಷ ರೂ.ಲಾಭ ಮಾಡಿದೆ ಎಂದು ಹಡಲಗೇರಿ ವಿವಿದೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಂಗಪ್ಪ ಸಿ.ಮುದ್ನಾಳ ಹೇಳಿದರು. ತಾಲ್ಲೂಕಿನ ಹಡಲಗೇರಿಯಲ್ಲಿ ಸೋಮವಾರ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತದ 15 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರು ಪಡೆದುಕೊಂಡ ಸಾಲವನ್ನು