ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು ದೇವರ ಜಾತ್ರಾ ಮಹೋತ್ಸವದಲ್ಲಿ ನೂತನವಾಗಿ ಕರ್ನಾಟಕ ಸರಕಾರದ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಥಳೀಯ ನಿವಾಸಿ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಅವರನ್ನು ಜಾತ್ರಾ ಕಮೀಟಿ ಹಾಗೂ ತಾಂಡಾದ ಹಿರಿಯರು ರಾಜಕೀಯ ಮುಖಂಡರ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಮಾತನಾಡಿ ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸಭಾಪತಿ ರುದ್ರಪ್ಪ ಲಮಾಣಿ ಅವರ ಸರಕಾರ ಅಧಿಕಾರ ನೀಡಿದ್ದಾರೆ. ನಮ್ಮ ಬಂಜಾರ ಸಂಸ್ಕೃತಿ ಭಾಷೆ ಉಳಿಯಲು ನಿಷ್ಪಕ್ಷಪಾತದಿಂದ ನನ್ನ ಅಧಿಕಾರ ನಡೆಸುತ್ತೇನೆ ಎಂದರು.

          ಊರಿನ ಹಿರಿಯರಾದ ಬಾಬು ನಾಯಕ, ವಾಲು ನಾಯಕ, ರಾಮು ರಾಠೋಡ, ಖುಬಪ್ಪ ರಾಠೋಡ, ನಿವೃತ್ತ ಮೀನುಗಾರಿಕೆ ಸಹಾಯಕ ನಿರ್ದೇಶಕ ಬಿ ಎಸ್ ಲಮಾಣಿ, ಡಾ.ತಿರುಪತಿ ಶಿರಡಿನಾಯಕ, ಕಾಂಗ್ರೆಸ್ ಮುಖಂಡ ಸಂತೋಷ ಚವ್ಹಾಣ, ಗ್ರಾ.ಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಗ್ರಾ.ಪಂ ಸದಸ್ಯ ಥಾವರಪ್ಪ ಜಾಧವ, ನಿವೃತ್ತ ಸಿ.ಪಿ.ಆಯ್ ಶಿವಾನಂದ ನಾಯಕ, ಜಾತ್ರಾ ಕಮೀಟಿ ಅಧ್ಯಕ್ಷ ಶಾಂತಪ್ಪ ರಾಠೋಡ, ಜಾತ್ರಾ ಕಮೀಟಿ ಮುಖಂಡ ಸಂತೋಷ ಚವ್ಹಾಣ, ವಕೀಲರಾದ ತುಕಾರಾಮ ಹುಲ್ಲೂರ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ