ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ ಸಂಸ್ಥೆಯ ವತಿಯಿಂದ “ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್” ಪರೀಕ್ಷೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ.

ಈ ಪರೀಕ್ಷೆ ಮಾರ್ಚ್ 29ರಂದು (ಭಾನುವಾರ) ಬೆಳಿಗ್ಗೆ 10:30 ಗಂಟೆಗೆ ನಡೆಯಲಿದ್ದು, 3ನೇ ಮತ್ತು 4ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.

ಪರೀಕ್ಷೆಯು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿಯಲ್ಲಿರುವ ವಿದ್ಯಾಸ್ಪೂರ್ತಿ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಲಿದೆ. ಪರೀಕ್ಷೆಯಲ್ಲಿ ಕನ್ನಡ, ಇಂಗ್ಲಿಷ್, ಗಣಿತ ಹಾಗೂ ಸಾಮಾನ್ಯ ಜ್ಞಾನ ವಿಷಯಗಳಿಗೆ ಸಂಬAಧಿಸಿದAತೆ ಒಟ್ಟು 50 ಅಂಕಗಳ ಬಹು ಆಯ್ಕೆಯ ಪ್ರಶ್ನೆಗಳು ಇರಲಿವೆ.ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನವಾಗಿ 35,001 ರೂ., ದ್ವಿತೀಯ ಬಹುಮಾನ 28,001ರೂ. ಹಾಗೂ ತೃತೀಯ ಬಹುಮಾನ 22,001ರೂ. ನೀಡಲಾಗುತ್ತದೆ. ಜೊತೆಗೆ, ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೊದಲ 10 ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷೆ ಬಸಮ್ಮ ಸಿದರೆಡ್ಡಿ ಹಾಗೂ ಕಾರ್ಯದರ್ಶಿ ಮಹಾಂತೇಶ ಸಿದರೆಡ್ಡಿ ತಿಳಿಸಿದ್ದಾರೆ.
ಈ ಪರೀಕ್ಷೆಗೆ ಯಾವುದೇ ಶುಲ್ಕವಿಲ್ಲದೆ ಉಚಿತ ಪ್ರವೇಶ ನೀಡಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸ್ಥೆ ಮನವಿ ಮಾಡಿದೆ.ಹೆಚ್ಚಿನ ಮಾಹಿತಿಗೆ ಮೊ;8861258800 ಮತ್ತು 9620201224 ಸಂಪರ್ಕಿಸಬಹುದಾಗಿದೆ.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ