ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ.

ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಚೆನ್ನಯ್ಯ ಡೆತ್ ನೋಟ್‌ನ್ನು ತಮ್ಮ ಸಹೋದರನಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬAಧಿಸಿದAತೆ ಒಬ್ಬ ಆರೋಪಿಯನ್ನು ಬಂಧಿಸಿದ್ದು ಇನ್ನೋರ್ವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾಗಿ ಪಿಎಸ್‌ಐ ಸಂಜಯ ತಿಪರೆಡ್ಡಿ ತಿಳಿಸಿದ್ದಾರೆ.ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ನ ಕೊಟ್ಟ ಸಂಸ್ಥೆ ಸ್ಮರಣೆ: ಸಾಯುವ ಮುನ್ನ ಚೆನ್ನಯ್ಯ ಬರೆದಿರುವ ಡೆತ್ ನೋಟ್‌ನಲ್ಲಿ ತಮಗೆ ಅನ್ನ ಹಾಕಿ ಸಲುಹಿದ ವೀರಶೈವ ವಿದ್ಯಾವರ್ಧಕ ಸಂಸ್ಥೆಯ ಹಿಂದಿನ ಹಾಗೂ ಈಗಿನ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

Latest News

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ:                                            ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಏಕಲವ್ಯ ರೋಲರ್

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ :                                      ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನಡೆಸುವ ನೇಕಾರರು ಗ್ರಾಮೀಣ ಭಾಗದಲ್ಲಿ ಸಂಕಷ್ಟದಲ್ಲಿದ್ದು ಅವರಿಗೆ ಸರ್ಕಾರ ಸೂಕ್ತ ನೆರವು ಒದಗಿಸಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹೇಳಿದರು. ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ 27ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.ನೇಕಾರರ ಬದುಕು