ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಪರೀಕ್ಷೆಗೆ ಕೂತಿದ್ದ ಒಟ್ಟು 1073 ವಿದ್ಯಾರ್ಥಿಗಳಲ್ಲಿ 900 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಪಾಸಾಗಿದ್ದು 166 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಒಟ್ಟಾರೆ ಕಾಲೇಜಿನ ಫಲಿತಾಂಶ ಶೇ.99.53 ರಷ್ಟಾಗಿದೆ.ಗಣಿತದಲ್ಲಿ 418, ಬಯೋಲಜಿಯಲ್ಲಿ 70, ಫಿಸಿಕ್ಸನಲ್ಲಿ 72,ಕಂಪ್ಯೂಟರ್ ಸೈನ್ಸ್ನಲ್ಲಿ 10,ಕನ್ನಡದಲ್ಲಿ 3,ಹಿಂದಿಯಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿಗಳಾದ ಅಮೀತಗೌಡ ಪಾಟೀಲ, ದರ್ಶನಗೌಡ ಪಾಟೀಲ,ಮುಖ್ಯವ್ಯವಸ್ಥಾಪಕ ವಿಜಯಕುಮಾರ ಪಾಟೀಲ,ಪ್ರಾಚಾರ್ಯ ಇಸ್ಮಾಯಿಲ್ ಮನಿಯಾರ್, ಶಿಕ್ಷಕರಾದ ರಾಜಶೇಖರ ಹಿರೇಮಠ,ರೇವಣಸಿದ್ದ ಮುರಾಳ ಮತ್ತಿತರರು ಅಭಿನಂದಿಸಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ