ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಪಾಲಕರನ್ನು ಸಂಪರ್ಕಿಸಿ ಅವರನ್ನು ತಮ್ಮ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಳ್ಳಲು ಹಿಂಬಾಗಿಲಿನ ಮೂಲಕ ಶಿಕ್ಷಕರನ್ನು ಕಳಿಸಿ ತಮ್ಮ ವಿದ್ಯಾಸಂಸ್ಥೆಗಳ ಹೆಸರು ಮಾಡಿಕೊಳ್ಳುತ್ತಾ ಕೆಲವರು ಹೊರಟಿದ್ದಾರೆ.ನಮ್ಮಲ್ಲೂ ಗುಣಮಟ್ಟದ ಶಿಕ್ಷಣವನ್ನು ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತವಾಗಿಯೇ ಶಿಕ್ಷಣ ನೀಡುತ್ತೇವೆ.ಪಾಲಕರು ಇಲ್ಲಿ ಓದಿ ಬುದ್ಧಿವಂತರಾದ ಮಕ್ಕಳನ್ನು ಬೇರೆ ಶಾಲೆಗಳಿಗೆ ಪ್ರವೇಶ ಪಡೆದುಕೊಳ್ಳಲು ಕಳಿಸುವ ಮುನ್ನ ಆಲೋಚನೆ ಮಾಡಬೇಕು ಎಂದು ಸಲಹೆ ಮಾಡಿದರು.

ಸಂಸ್ಥೆಯ ಆಡಳಿತಾಧಿಕಾರಿ ಕಿರಣ ಮದರಿ ಮಾತನಾಡಿ, ಪರೀಕ್ಷೆಯ ಸಮಯದಲ್ಲಿಯೇ ಹಿಂದಿ ಭಾಷೆಗೆ ಅಂಕಗಳ ಬದಲು ಗ್ರೇಡ್ ಪದ್ಧತಿ ಜಾರಿಗೊಳಿಸಲಾಗುವುದು ಎಂದು ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಅಲ್ಪ ವ್ಯತ್ಯಾಸವಾಗಿದೆ.ಮುಂಬರುವ ವರ್ಷಗಳಲ್ಲಿ ನಮ್ಮ ಶಾಲೆಗಳಿಂದ ರಾಜ್ಯಮಟ್ಟದ ಸಾಧನೆ ತೋರುವಂತಹ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳನ್ನು ಸಿದ್ಧ ಮಾಡುವುದಾಗಿ ತಿಳಿಸಿದರು.

ಸಂಸ್ಥೆಯ ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಮಾತನಾಡಿ, ಕಳೆದ ಆರು ವರ್ಷಗಳಲ್ಲಿ ನಮ್ಮ ಶಾಲೆಯ ಫಲಿತಾಂಶ ಅತ್ಯುತ್ತಮವಾಗಿ ಬಂದಿದೆ.ಇನ್ನಷ್ಟು ಪ್ರಯತ್ನ ಮಾಡಿದ್ದರೆ ಒಳ್ಳೆಯ ಸ್ಥಾನದಲ್ಲಿ ವಿದ್ಯಾರ್ಥಿಗಳು ಕಾಣಿಸಿಕೊಳ್ಳುತ್ತಿದ್ದರು.ಆದರೂ ಇಂತಹ ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳನ್ನು ಕರೆತಂದು ಗುಣಮಟ್ಟದ ಶಿಕ್ಷಣ ಶಿಕ್ಷಕರು ನೀಡಿದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದರು. ಸಂಸ್ಥೆಯ ನಿರ್ದೇಶಕರಾದ ಶ್ರೀದೇವಿ ಮದರಿ, ಸಲಹೆಗಾರರಾದ ರವಿ ಜಗಲಿ,ಬಸವರಾಜ ಗೂಡ್ಲಮನಿ, ಆಕಾಶ ಮದರಿ, ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆ ಮುಖ್ಯ ಗುರುಗಳಾದ ಪ್ರಶಾಂತ ಬಿರಾದಾರ, ಭೀಮಣ್ಣ ಪೂಜಾರಿ, ಅಜಿತ್ ಸರ್,ಅಡಳಿತ ಅಧಿಕಾರಿ ಗೀತಾ ಹುರಕಡ್ಲಿ,ಕಾಲೇಜಿನ ಪ್ರಾಂಶುಪಾಲ ಎಂ.ಎA.ಧನ್ನೂರ, ವಿರೇಶ ಹುಲಿಕೇರಿ ಇದ್ದರು.

ಫಲಿತಾಂಶ ಇಂತಿದೆ:
ಪಟ್ಟು ಪರೀಕ್ಷೆಗೆ ಕೂತಿದ್ದ 191 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದಾರೆ. ಶೇ.95ಕ್ಕೂ ಅಧಿಕ 11,ಶೇ.90ಕ್ಕೂ ಅಧಿಕ 33,ಡಿಸ್ಟಿಂಕ್ಷನ್ 74,ಪ್ರಥಮ ದರ್ಜೆ 113,ಎರಡನೇ ಸ್ಥಾನ 4 ಪಡೆದುಕೊಂಡಿದ್ದಾರೆ.ಅದರಲ್ಲಿ ಶ್ರೀನಿಧಿ ಬಡಿಗೇರ 616 ಅಂಕ ಪಡೆದು ಶಾಲೆಗೆ ಪ್ರಥಮ ರಾಜ್ಯಕ್ಕೆ ಎಂಟನೇ ಸ್ಥಾನ,ಸಿದ್ರಾಯ ಬಾಲರೆಡ್ಡಿ 610 ಅಂಕ ಪಡೆದು ದ್ವಿತೀಯ,ಮಲ್ಲಪ್ಪ ಗುಂಡಕನಾಳ 609 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.ಶೇ.90ಕ್ಕೂ ಅಧಿಕ ಅಂಕ ಪಡೆದುಕೊಂಡ ವಿದ್ಯಾರ್ಥಿಗಳನ್ನು ಸಂಸ್ಥೆಯಿOದ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ಸಂಸ್ಥೆಯ,ಶಾಲೆಯ ಬಗ್ಗೆ ವಿದ್ಯಾರ್ಥಿಗಳು,ಪಾಲಕರು ಅನಿಸಿಕೆ ಹಂಚಿಕೊOಡರು.

Latest News

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ:                                            ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಏಕಲವ್ಯ ರೋಲರ್

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ :                                      ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನಡೆಸುವ ನೇಕಾರರು ಗ್ರಾಮೀಣ ಭಾಗದಲ್ಲಿ ಸಂಕಷ್ಟದಲ್ಲಿದ್ದು ಅವರಿಗೆ ಸರ್ಕಾರ ಸೂಕ್ತ ನೆರವು ಒದಗಿಸಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹೇಳಿದರು. ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ 27ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.ನೇಕಾರರ ಬದುಕು